ಉಡುಪಿ : ಅಖಿಲ ಭಾರತ ಗೃಹರಕ್ಷಕ ದಳ ದಿನಾಚರಣೆ

ಉಡುಪಿ, ಡಿ.20: ಗೃಹರಕ್ಷಕ ದಳದ ಸದಸ್ಯರು ತಮಗೆ ನಿಯೋಜಿಸಿದ ಎಲ್ಲಾ ಕಾರ್ಯಗಳಲ್ಲಿ ಶಿಸ್ತುಬದ್ದವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಗೃಹರಕ್ಷಕ ದಳದ ಸೆಕೆಂಡ್ ಇನ್ ಕಮಾಂಡೆಂಟ್ ಕೆ.ಸಿ.ರಾಜೇಶ್ ತಿಳಿಸಿದ್ದಾರೆ.
ಮಂಗಳವಾರ ಉಡುಪಿಯ ಗೃಹರಕ್ಷಕ ದಳದ ಕಚೇರಿ ಆವರಣದಲ್ಲಿ ನಡೆದ ಅಖಿಲ ಭಾರತ ಗೃಹರಕ್ಷಕ ದಳ ದಿನಾಚರಣೆ ಕಾರ್ಯಕ್ರಮ ಭಾಗವಹಿಸಿ ಅವರು ಮಾತನಾಡುತಿದ್ದರು.
ಮಂಗಳವಾರ ಉಡುಪಿಯ ಗೃಹರಕ್ಷಕ ದಳದ ಕಚೇರಿ ಆವರಣದಲ್ಲಿ ನಡೆದ ಅಖಿಲ ಾರತಗೃಹರಕ್ಷಕದಳದಿನಾಚರಣೆಕಾರ್ಯಕ್ರಮಾಗವಹಿಸಿ ಅವರು ಮಾತನಾಡುತಿದ್ದರು. ಗೃಹರಕ್ಷಕ ದಳದ ಸಿಬ್ಬಂದಿ ಪೊಲೀಸ್ ಇಲಾಖೆಯ ನೆರಳಿನಂತೆ ಕರ್ತವ್ಯ ನಿರ್ವಹಿಸುತ್ತಿದ್ದು, ಸಮಾಜ ಮತ್ತು ನಾಗರಿಕರ ರಕ್ಷಣೆಗೆ ಬದ್ಧವಾಗಿದೆ. ಪೊಲೀಸ್ ಇಲಾಖೆಯೊಂದಿಗೆ ರಕ್ಷಣಾತ್ಮಕ ಕಾರ್ಯಗಳು, ಕಾನೂನು ಸುವ್ಯವಸ್ಥೆ ಮಾತ್ರ ವಲ್ಲದೇ, ಪ್ರಕೃತಿ ವಿಕೋಪದಂತಹ ಸಮಯದಲ್ಲೂ ಸಹ ನಾಗರಿಕ ಸೇವೆ ಸಲ್ಲಿಸುತ್ತಿದೆ ಎಂದರು.
ಜಿಲ್ಲಾ ಕಮಾಂಡೆಂಟ್‌ಡಾ.ಕೆ.ಪ್ರಶಾಂತ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ, ವಾರ್ಷಿಕ ವರದಿ ವಾಚಿಸಿದರು.
ಘಟಕಾಧಿಕಾರಿ ಪ್ರಭಾಕರ ಸುವರ್ಣ ಪ್ರತಿಜ್ಞಾ ವಿಧಿ ಬೋಧಿಸಿದರು.
ಗೃಹರಕ್ಷಕ ದಳದ ಮೂಲಕ ಸಲ್ಲಿಸಿದ ಸೇವೆಗಾಗಿ ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದ ಜಿಲ್ಲಾ ಕಮಾಂಡೆಂಟ್ ಡಾ.ಕೆ.ಪ್ರಶಾಂತ ಶೆಟ್ಟಿ ಹಾಗೂ ರಾಜ್ಯ ಮಟ್ಟದಲ್ಲಿ ನಡೆದ ಗೃಹರಕ್ಷಕ ದಳದ ಕ್ರೀಡಾಕೂಟದಲ್ಲಿ ಬಹುಮಾನ ಪಡೆದ ಶ್ರೀಪ್ರಸಾದ್, ರಾಜೇಶ ಪೂಜಾರಿ, ನನೀಶ್, ಸದಾಶಿವ, ಸಂತೋಷ್ ದೇವಾಡಿಗರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಗೃಹರಕ್ಷಕ ದಳದ ಡೆಪ್ಯುಟಿ ಕಮಾಂಡೆಂಟ್ ರಮೇಶ್, ಕಚೇರಿಯ ಅಧೀಕ್ಷಕಿ ಕವಿತಾ, ಶ್ಯಾಮಲಾ ಉಪಸ್ಥಿತರಿದ್ದರು.
♦♦♦♦♦♦♦♦♦♦♦♦♦♦♦♦♦♦♦♦♦♦♦♦♦
ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?
ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ.







