ಭಟ್ಕಳ: ಮಾವಿನಕುರ್ವೆ ಪ್ರೌಢಶಾಲೆಯಲ್ಲಿ ಸೈಕಲ್ ವಿತರಣೆ

ಭಟ್ಕಳ , ಡಿ.20 : ತಾಲೂಕಿನ ಮಾವಿನಕುರ್ವೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಸಕ ಮಾಂಕಾಳ್ ಪ್ರೌಢ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡಿದರು.
ಸರ್ಕಾರದ ವಿದ್ಯಾರ್ಥಿ ಸ್ನೇಹಿ ಯೋಜನೆಯ ಭಾಗವಾಗಿರುವ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಕಾರ್ಯಕ್ರಮವು ಶೈಕ್ಷಣಿಕ ಗುಣಮಟ್ಟ ಸುಧಾರಿಸುವಲ್ಲಿ ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದಿಸಿದ ಶಾಸಕರು, ಶೈಕ್ಷಣಿಕ ಗುಣಮಟ್ಟ ಸುಧಾರಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಂದಲೇ ಸಲಹೆಗಳನ್ನು ಪಡೆದರು.
ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ತಾಳ್ಮೆಯಿಂದ ಉತ್ತರಿಸಿದ ಅವರು ವಿದ್ಯಾರ್ಥಿಗಳ ಬೇಡಿಕೆಗಳನ್ನು ಪಟ್ಟಿಮಾಡಿ ಶೀಘ್ರದಲ್ಲೇ ಪರಿಹರಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಉ.ಕ.ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ್, ಭಟ್ಕಳ ತಾಲೂಕು ಪಂಚಾಯತ್ ಸಾಮಾಜಿಕ ನ್ಯಾಯಾ ಸಮಿತಿ ಅಧ್ಯಕ್ಷ ವಿಷ್ಣು ದೀವಾಡಿಗ ಸೇರಿದಂತೆ ಮಾವಿನಕುರ್ವೆ ಪಂಚಾಯತ್ ಸದಸ್ಯರು, ಶಾಲಾ ಮುಖ್ಯೋಪಾಧ್ಯಾರು ಹಾಗೂ ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.
♦♦♦♦♦♦♦♦♦♦♦♦♦♦♦♦♦♦♦♦♦♦♦♦♦
ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?
ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ.







