Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಿನ್ನಿಗೋಳಿ ಮಹಿಳಾ ಮೀನುಗಾರರಿಂದ...

ಕಿನ್ನಿಗೋಳಿ ಮಹಿಳಾ ಮೀನುಗಾರರಿಂದ ಪ್ರತಿಭಟನೆ

ಪುರುಷ ಮೀನುಗಾರರ ತೆರವಿಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ20 Dec 2016 11:01 PM IST
share
ಕಿನ್ನಿಗೋಳಿ ಮಹಿಳಾ ಮೀನುಗಾರರಿಂದ ಪ್ರತಿಭಟನೆ

ಮುಲ್ಕಿ, ಡಿ.20: ಕಿನ್ನಿಗೋಳಿ ಮಹಿಳಾ ಮೀನು ಮಾರುಕಟ್ಟೆಯಲ್ಲಿ ಮೀನು ವ್ಯಾಪಾರ ನಡೆಸುತ್ತಿರುವ ಸ್ಥಳೀಯ ಪುರುಷ ಮೀನುಗಾರರನ್ನು ಮಾರುಕಟ್ಟೆಯಿಂದ ತೆರವುಗೊಳಿಸಬೇಕು ಎಂದು ಆಗ್ರಹಿಸಿ ಮೀನುಗಾರ ಮಹಿಳೆಯರು ಕಿನ್ನಿಗೋಳಿ ಗ್ರಾಪಂ ಮುಂಭಾಗ ಧರಣಿ ನಡೆಸಿ ಪಿಡಿಒ ಅವರಿಗೆ ಮನವಿ ಸಲ್ಲಿಸಿದರು.
 ಕಿನ್ನಿಗೋಳಿ, ಸುರತ್ಕಲ್, ಹಳೆಯಂಗಡಿ, ಮುಲ್ಕಿ ವ್ಯಾಪ್ತಿಯ ಮಹಿಳಾ ಹಸಿ ಮೀನು ಮಾರಾಟ ಮಾಡುವ ಸುಮಾರು 200 ಮಹಿಳೆಯರು ಧರಣಿಯಲ್ಲಿ ಭಾಗವಹಿಸಿ ಪುರುಷ ವ್ಯಾಪಾರಿಗಳನ್ನು ತೆರವುಗೊಳಿಸಬೇಕು. ಕಿನ್ನಿಗೋಳಿ ಪರಿಸರದಲ್ಲಿ ಅವರಿಗೆ ಮೀನು ವ್ಯಾಪಾರ ಮಾಡಲು ಪಂಚಾಯತ್ ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.
ಮಂಗಳೂರು ಹಸಿ ಮೀನುಗಾರರ ಸಂಘದ ಅಧ್ಯಕ್ಷೆ ಅಹಲ್ಯಾ ಮಾತನಾಡಿ, ಪುರುಷ ಮೀನುಗಾಗರಿಗೆ ಎರಡು ಬಾಕ್ಸ್ ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ಆದರೆ, ಅವರು 10ರಿಂದ 20 ಬಾಕ್ಸ್ ಮೀನುಗಳನ್ನು ಮಾರಾಟ ಮಾಡುತ್ತಿದ್ದು ಇದರಿಂದ ಒಂದು ಬುಟ್ಟಿ ಮಾರಾಟ ಮಾಡುವ ಮಹಿಳಾ ಮೀನುಗಾರರು ತೊಂದರೆ ಅನುಭವಿಸುವಂತಾಗಿದೆ ಎಂದರು.ಮೀನು ಮಾರಾಟಗಾರರ ಮುಖಂಡ ಯಶ್ಪಾಲ್ ಸುವರ್ಣ ಮಾತನಾಡಿದರು.
ಧರಣಿನಿರತರ ಮನವಿ ಸ್ವೀಕರಿಸಿ ಬಳಿಕ ಮಾತನಾಡಿದ ಕಿನ್ನಿಗೋಳಿ ಗ್ರಾಪಂ ಅಧ್ಯಕ್ಷೆ ಫಿಲೊಮಿನಾ ಸಿಕ್ವೇರ, ಪುರುಷ ಮೀನುಗಾರರು ಸುಮಾರು 40 ವರ್ಷಗಳಿಂದ ತಮ್ಮ ಹಿರಿಯರ ಕಾಲದಿಂದಲೂ ಇಲ್ಲಿ ಮೀನು ಮಾರಾಟ ಮಾಡುತ್ತಿದ್ದಾರೆ. ಅಲ್ಲದೆ ಗ್ರಾಹಕರಿಗೆ ಕಡಿಮೆ ದರದಲ್ಲಿ ಮೀನು ನೀಡುತ್ತಿದ್ದಾರೆ. ಹೀಗಾಗಿ ಏಕಾಏಕಿ ಅವರನ್ನು ತೆರವುಗೊಳಿಸಬೇಕು ಮತ್ತು ಪಂಚಾಯತ್ ವ್ಯಾಪ್ತಿಯಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸುವುದು ಎಷ್ಟು ಸರಿ. ಈ ಬಗ್ಗೆ ನಾವು ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಮಾಡಲಿದ್ದೇವೆ ಎಂದರು.
ಧರಣಿಯಲ್ಲಿ ಬಿಜೆಪಿ ಮುಖಂಡರಾದ ಸತ್ಯಜಿತ್ ಸುರತ್ಕಲ್, ಈಶ್ವರ್ ಕಟೀಲು, ವಿನೋದ್ ಬೆಳ್ಳಾಯರು, ದೇವಪ್ರಸಾದ್ ಪುನರೂರು, ಭುವನಾಭಿರಾಮ ಉಡುಪ ಮೊದಲಾದವರಿದ್ದರು.
 

ರಾಜಕೀಯ ಪ್ರೇರಿತ ಧರಣಿ: ಧರಣಿಯಲ್ಲಿ ಕಿನ್ನಿಗೋಳಿ ಮೀನು ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುತ್ತಿರುವ ಬೆರಳೆಣಿಕೆಯ ಮಹಿಳೆಯರು ಬಿಟ್ಟರೆ ಉಳಿದಂತೆ ಬೇರೆ ಊರಿನ ಮಹಿಳೆಯರು ಮತ್ತು ಬಿಜೆಪಿ ನಾಯಕರೇ ಭಾಗವಹಿಸಿದ್ದರು. ಧರಣಿಯೂ ರಾಜಕೀಯ ಪ್ರೇರಿತ ಎಂದು ಸ್ಥಳೀಯರು ಆರೋಪಿಸಿದ್ದಾರೆ.
 

ಪುರುಷ ವ್ಯಾಪರಸ್ಥರ ಆಗ್ರಹ: ಈ ಬಗ್ಗೆ ಪತ್ರಿಕೆಗೆ ಪ್ರತಿಕ್ರಿಯಿಸಿರುವ ಕಿನ್ನಿಗೋಳಿ ಮಾರುಕಟ್ಟೆಯ ಪುರುಷ ಮೀನುಗಾರರು, ಈಗಿನ ಮಹಿಳೆಯರು ಕಿನ್ನಿಗೋಳಿ ಮಾರುಕಟ್ಟೆ ಕಾಣುವ ಮೊದಲೇ ನಮ್ಮ ಕುಟುಂಬ ಕಳೆದ 60 ವರ್ಷಗಳಿಂದ ಇಲ್ಲಿ ವ್ಯಾಪಾರ ನಡೆಸುತ್ತಾ ಬಂದಿದೆ. ತೆರವಿನ ಬಗ್ಗೆ ಕಳೆದ ಸಾಮಾನ್ಯ ಸಭೆಯಲ್ಲಿಯೂ ಚಚೆರ್ಗಳು ನಡೆದಿದ್ದವು. ಆಗ ಮಾತನಾಡದವರು ಈಗ ಏಕಾಏಕಿ ತೆರವುಗೊಳಿಸಬೇಕೆನ್ನುವುದು ನ್ಯಾಯಯುತವಾದ ವಾದಲ್ಲ. ಸ್ಥಳೀಯರೂ ಮಹಿಳೆಯರ ಕ್ರಮದ ವಿರುದ್ಧವಾಗಿದ್ದಾರೆ. ಅಲ್ಲದೆ, ಮಾರುಕಟ್ಟೆಯ ಕೆಲ ಮಹಿಳೆಯರೂ ಈ ಕ್ರಮದ ವಿರುದ್ಧ ಇದ್ದಾರೆ. ಯಾವುದೇ ಕಾರಣಕ್ಕೂ ಈಗ ವ್ಯಾಪಾರ ನಡೆಸುತ್ತಿರುವ ಸ್ಥಳದಿಂದ ಸ್ಥಳಾಂತರ ಗೊಳ್ಳುವ ಪ್ರಶ್ನೇಯೇ ಇಲ್ಲ. ಪಂಚಾಯತ್ ಕಿನ್ನಿಗೋಳಿಯಲ್ಲೇ ಬೇರೆ ವ್ಯವಸ್ಥೆ ಮಾಡಿಕೊಟ್ಟರೆ ಸ್ಥಳಾಂತರಗೊಳ್ಳುತ್ತೇವೆ.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X