ಬಾಲಕಿಯ ಅತ್ಯಾಚಾರ: ಮಲತಂದೆಯ ಬಂಧನ
ಶಿವಮೊಗ್ಗ, ಡಿ.20: ಬಾಲಕಿಯನ್ನು ನಿರಂತರವಾಗಿ ಅತ್ಯಾಚಾರ ನಡೆಸುತ್ತಿದ್ದ ಆರೋಪದ ಮೇರೆಗೆ ಮಲತಂದೆಯನ್ನು ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗ ನಗರದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ವರದಿಯಾಗಿದೆ. ಸಿದ್ದೀಕ್(28) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ಈತ ಬಾಲಕಿಯ ಮೇಲೆ ಕಳೆದ ಸುಮಾರು ಒಂದು ತಿಂಗಳಿನಿಂದ ಅತ್ಯಾಚಾರ ನಡೆಸಿಕೊಂಡು ಬರುತ್ತಿದ್ದ. ಈ ಬಗ್ಗೆ ವಿನೋಬನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಜೊತೆಗೆ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಆಪಾದಿತನ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
Next Story





