ಬೈಕ್ ಮುಖಾಮುಖಿ ಢಿಕ್ಕಿ: ಶಿಕ್ಷಕ ಸಾವು
ಶಿವಮೊಗ್ಗ, ಡಿ.20: ಎರಡು ಬೈಕ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಶಿಕ್ಷಕರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹೊರವಲಯ ಸಂತೋಷ್ ರೈಸ್ ಮಿಲ್ ಬಳಿ ವರದಿಯಾಗಿದೆ.
ಶಿಕಾರಿಪುರ ತಾಲೂಕಿನ ಗಾಮ ಗ್ರಾಮದ ಎಂ.ಬಿ. ಶಿವಸ್ವಾಮಿ(48) ಮೃತಪಟ್ಟ ಶಿಕ್ಷಕರೆಂದು ಗುರುತಿಸಲಾಗಿದೆ. ಇವರು ಅದೇ ತಾಲೂಕಿನ ಚುರ್ಚುಗುಂಡಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಮತ್ತೊಂದು ಬೈಕ್‌ನ ಸವಾರನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅತಿವೇಗದ ಚಾಲನೆಯೇ ಅವಘಡಕ್ಕೆ ಕಾರಣವಾಗಿದ್ದು, ಈ ಕುರಿತಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿಡ್ಡಳ್ಳಿ ನಿರಾಶ್ರಿತ ಆದಿವಾಸಿಗಳ ಪರ ನಿಂತ ವಿವಿಧ ಸಂಘಟನೆ, ಪಕ್ಷಗಳು
Next Story





