ಟೀಂ ಇಂಡಿಯಾ ಜಯಭೇರಿ..!
ಚೆನ್ನೈನ ಚಿಪಾಕ್‌ನಲ್ಲಿರುವ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐದನೆ ಹಾಗೂ ಅಂತಿಮ ಕ್ರಿಕೆಟ್ ಟೆಸ್ಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಇನಿಂಗ್ಸ್ ಹಾಗೂ 75 ರನ್‌ಗಳ ಭರ್ಜರಿ ಜಯ ಗಳಿಸಿದ್ದು, ಐದು ಟೆಸ್ಟ್‌ಗಳ ಸರಣಿಯನ್ನು 4-0 ಅಂತರದಲ್ಲಿ ಜಯಭೇರಿ ಬಾರಿಸಿದೆ. ಎರಡನೆ ಇನಿಂಗ್ಸ್‌ನಲ್ಲಿ ಸ್ಪಿನ್ನರ್ ರವೀಂದ್ರ ಜಡೇಜ 7 ವಿಕೆಟ್ ಕಿತ್ತು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ತ್ರಿಶತಕ ದಾಖಲಿಸಿದ ಕರ್ನಾಟಕದ ಕರುಣ್ ನಾಯರ್ ಪಂದ್ಯಶ್ರೇಷ್ಠ ಮತ್ತು ನಾಯಕ ವಿರಾಟ್ ಕೊಹ್ಲಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
Next Story





