Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿ.ಸಿ.ರೋಡ್ ಕೈಕಂಬ ರಸ್ತೆ ಬದಿಯಲ್ಲಿ...

ಬಿ.ಸಿ.ರೋಡ್ ಕೈಕಂಬ ರಸ್ತೆ ಬದಿಯಲ್ಲಿ ಹೊಂಡ

: ಸಾರ್ವಜನಿಕರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ21 Dec 2016 12:17 AM IST
share

ಬಂಟ್ವಾಳ, ಡಿ.20: ಬಸ್‌ಬೇ ಹಾಗೂ ರಸ್ತೆ ವಿಸ್ತರಣೆಗಾಗಿ ಬಿ.ಸಿ.ರೋಡ್ ಕೈಕಂಬದ ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಯಲ್ಲಿ ತೆಗೆದಿರುವ ಹೊಂಡದಿಂದ ಸಾರ್ವಜನಿಕರಿಗೆ ಆಗುತ್ತಿರುವ ಅನನುಕೂಲತೆಯನ್ನು ಮುಂದಿಟ್ಟು ಕೈಕಂಬದ ಅಂಗಡಿ ಮಾಲಕರು, ಆಟೊ ರಿಕ್ಷಾ ಚಾಲಕರ ಸಹಿತ ಸಾರ್ವಜನಿಕರು ಮಂಗಳವಾರ ಬೆಳಗ್ಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನುದ್ದೇಶಿಸಿ ಬಂಟ್ವಾಳ ಬ್ಯಾರಿ ಫೌಂಡೇಶನ್ ಅಧ್ಯಕ್ಷ ರಹೀಂ ಪಿ., ಉಪಾಧ್ಯಕ್ಷ ಕೆ.ಎಚ್.ಅಬೂಬಕರ್, ಪ್ರಧಾನ ಕಾರ್ಯದರ್ಶಿ ಅಕ್ಬರ್ ಅಲಿ, ಎಸ್‌ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಶಾಹುಲ್ ಹಮೀದ್ ಎಸ್.ಎಚ್. ಮಾತನಾಡಿದರು. ಬಸ್‌ಬೇ ಹಾಗೂ ರಸ್ತೆ ವಿಸ್ತರಣೆಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಬಂಟ್ವಾಳ ಟ್ರಾಫಿಕ್ ಪೊಲೀಸರು ಕೈಕಂಬ ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಯಲ್ಲಿ 3ರಿಂದ 4 ಅಡಿ ಆಳದ ಹೊಂಡ ನಿರ್ಮಿಸಿದ್ದಾರೆ. ಇದರ ಕಾಮಗಾರಿಯನ್ನು ಅರ್ಧದಲ್ಲೇ ನಿಲ್ಲಿಸಿರುವುದರಿಂದ ಪಾದಚಾರಿಗಳಿಗೆ ತೊಡಕಾಗಿ ಪರಿಣಮಿಸಿದೆ. ವೃದ್ಧರು, ಶಾಲಾ ವಿದ್ಯಾರ್ಥಿಗಳು, ಮಹಿಳೆಯರು ಹೊಂಡಕ್ಕೆ ಬಿದ್ದು ಗಾಯಗೊಳ್ಳುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

 ಅಭಿವೃದ್ಧಿ ಮತ್ತು ಸುಗಮ ಸಂಚಾರದ ದೃಷ್ಟಿಯಿಂದ ರಸ್ತೆ ವಿಸ್ತರಣೆ ಹಾಗೂ ಬಸ್‌ಬೇ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ಆದರೆ ಕಾಮಗಾರಿಯನ್ನು ಅರ್ಧದಲ್ಲೇ ಮೊಟಕುಗೊಳಿಸಿದ್ದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಇಲ್ಲಿನ ವ್ಯಾಪಾರಿಗಳು, ಆಟೊ ರಿಕ್ಷಾ ಚಾಲಕರಿಗೂ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿ, ಬಂಟ್ವಾಳ ತಹಶೀಲ್ದಾರ್, ಪುರಸಭೆ ಹಾಗೂ ಬಂಟ್ವಾಳ ಪೊಲೀಸರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಒಂದು ವಾರದೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಚಳವಳಿ ನಡೆಸ ಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಇದೇ ವೇಳೆ ಪ್ರತಿಭಟನಾಕಾರರು ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಜಿಲ್ಲಾಧಿಕಾರಿ,ಬಂಟ್ವಾಳ ತಹಶೀಲ್ದಾರ್, ಪುರಸಭೆ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಲು ಆಗಮಿಸಿದ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಮಾತನಾಡಿ, ಇಲ್ಲಿ ಹೊಂಡ ತೆಗೆದಿರುವುದು ನನ್ನ ಗಮನಕ್ಕೆ ಬಂದಿಲ್ಲ ಎಂದಾಗ ಪ್ರತಿಭಟನಾಕಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದು ಗೊಂದಲದವಾತಾವರಣ ನಿರ್ಮಾಣವಾಯಿತು. ಪ್ರತಿಭಟನೆಯಲ್ಲಿ ಯೂಸುಫ್ ಆಲಡ್ಕ, ಇಸ್ಹಾಕ್ ತಲಪಾಡಿ, ಮುಸ್ತಫಾ, ಪ್ರಶಾಂತ್, ರಮೇಶ್, ಇಕ್ಬಾಲ್ ನಂದರಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.

 

 

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X