ಬೋಳಾರ ನಾರಾಯಣ ಶೆಟ್ಟಿ ಸಂಸ್ಮರಣೆ, ಪ್ರಶಸ್ತಿ ಪ್ರದಾನ

ಮಂಗಳೂರು, ಡಿ.20: ಕಲಾವಿದರ ಜೀವನದಲ್ಲಿ ಶಿಸ್ತು ಮತ್ತು ಕರ್ತವ್ಯ ನಿಷ್ಠೆ ಮುಖ್ಯ. ಸಂಪಾಜೆ ಶೀನಪ್ಪರೈಯವರಲ್ಲಿ ಇವೆರಡೂ ಇವೆ ಎಂದು ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಗುರುದೇವಾನಂದ ಸ್ವಾಮೀಜಿ ಹೇಳಿದ್ದಾರೆ.
ದಿ. ಬೋಳಾರ ನಾರಾಯಣ ಶೆಟ್ಟಿ ಯಕ್ಷ ಪ್ರತಿಷ್ಠಾನದ ವತಿಯಿಂದ ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಜ್ಞ್ಞಾನ ಮಂದಿರದಲ್ಲಿ ಜರಗಿದ 8ನೆ ವರ್ಷದ ‘ಬೋಳಾರ ನಾರಾಯಣ ಶೆಟ್ಟಿ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ’ ಸಮಾರಂಭದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಸಂಪಾಜೆ ಶೀನಪ್ಪರೈಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಆಶೀರ್ವಚನ ನೀಡಿದರು. ಮಾಣಿಲ ಶ್ರೀಧಾಮ ಲಕ್ಷ್ಮೀ ಕ್ಷೇತ್ರದ ಮೋಹನದಾಸ ಪರಮಹಂಸ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ವಿಶ್ವಸ್ಥ ಮಂಡಳಿ ಸದಸ್ಯ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಬೋಳಾರ ಸಂಸ್ಮರಣೆಗೈದರು. ವಿಹಿಂಪ ಜಿಲ್ಲಾಧ್ಯಕ್ಷ ಜಗದೀಶ ಶೇಣವ, ಕೃಷ್ಣ ಎಲ್. ಶೆಟ್ಟಿ, ಕಿಶೋರ್ ಕುಮಾರ್ ಎಂ. ಶೆಟ್ಟಿ, ಬೋಳಾರ ಕರುಣಾಕರ ಶೆಟ್ಟಿ, ಗೀತಾ ಕರುಣಾಕರ ಶೆಟ್ಟಿ, ಟ್ರಸ್ಟ್ ಸದಸ್ಯರಾದ ವಾಸುದೇವ ಆರ್. ಕೊಟ್ಟಾರಿ, ಕಿಶನ್ ಶೆಟ್ಟಿ, ಕೀರ್ತನ್ ಶೆಟ್ಟಿ ಉಪಸ್ಥಿತರಿದ್ದರು.
ಒಡಿಯೂರು ಶ್ರೀಗುರುದೇವ ಗ್ರಾಮ ವಿಕಾಸ ಯೋಜನೆಯ ಸಂಚಾಲಕ ಟಿ. ತಾರಾನಾಥ ಕೊಟ್ಟಾರಿ ಸ್ವಾಗತಿಸಿದರು. ಕದ್ರಿ ನವನೀತ ಶೆಟ್ಟಿ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು. ದಿನಕರ ಶೆಟ್ಟಿ ಪ್ರಶಸ್ತಿ ಪತ್ರ ವಾಚಿಸಿದರು. ಅಧ್ಯಾಪಕ ಜಯಪ್ರಕಾಶ್ ಶೆಟ್ಟಿ ವಂದಿಸಿದರು. ಗ್ರಾಮ ವಿಕಾಸ ಯೋಜನೆಯ ಮೇಲ್ವಿಚಾರಕ ಸದಾಶಿವ ಅಳಿಕೆ ಕಾರ್ಯಕ್ರಮ ನಿರೂಪಿಸಿದರು.
♦♦♦♦♦♦♦♦♦♦♦♦♦♦♦♦♦♦♦♦♦♦♦♦♦
ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?
ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ.







