ಬಸ್ ಟಿಕೆಟ್ ದರ ಅರ್ಧಕ್ಕೆ ಇಳಿಸಲಿದೆ ಕೇಜ್ರಿವಾಲ್ ಸರ್ಕಾರ

ಹೊಸದಿಲ್ಲಿ, ಡಿ.21: ದಿಲ್ಲಿ ಸಾರಿಗೆ ನಿಗಮ ಮತ್ತು ಕ್ಲಸ್ಟರ್ ಬಸ್ (ಆರೆಂಜ್) ಪ್ರಯಾಣ ದರವನ್ನು ಶೇಕಡ 50ರಷ್ಟು ಇಳಿಸುವ ಮಹತ್ವದ ನಿರ್ಧಾರವನ್ನು ಕೇಜ್ರಿವಾಲ್ ಸರ್ಕಾರ ಕೈಗೊಂಡಿದೆ. ಸಾರ್ವಜನಿಕ ಸಾರಿಗೆಯಲ್ಲಿ ಜನ ಪ್ರಯಾಣಿಸುವಂತೆ ಉತ್ತೇಜಿಸುವ ಸಲುವಾಗಿ ಮತ್ತು ವೈಯಕ್ತಿಕ ವಾಹನಗಳನ್ನು ಜನ ಬಳಸದಂತೆ ಮಾಡುವ ಮೂಲಕ ವಾಹನಗಳಿಂದ ಉಂಟಾಗುವ ಮಾಲಿನ್ಯವನ್ನು ಕಡಿಮೆ ಮಾಡುವ ಸಲುವಾಗಿ ಈ ನಿರ್ಧಾರ ಕೈಗೊಂಡಿದೆ.
ಮುಂದಿನ ಒಂದೆರಡು ದಿನಗಳಲ್ಲಿ ಈ ಕುರಿತು ಅಧಿಕೃತ ಆದೇಶ ಹೊರ ಬೀಳಲಿದೆ. ಹೊಸ ದರ ಜನವರಿ ಒಂದರಿಂದ ಜಾರಿಗೆ ಬರುವ ನಿರೀಕ್ಷೆ ಇದೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.
ಸಾರ್ವಜನಿಕ ಸಾರಿಗೆ ಬಳಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಗರದಲ್ಲಿ ಹವಾನಿಯಂತ್ರಿತ ಮತ್ತು ಹವಾನಿಯಂತ್ರಿತವಲ್ಲದ ಬಸ್ಸುಗಳ ಪ್ರಯಾಣದರವನ್ನು ಪರಿಷ್ಕರಿಸುವ ಸಂಬಂಧ ಕಾರ್ಯಯೋಜನೆ ಸಿದ್ಧಪಡಿಸುವಂತೆ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಸಲಹೆ ಮಾಡಿದ ಎರಡೇ ದಿನಗಳಲ್ಲಿ ಮುಖ್ಯಮಂತ್ರಿ ಈ ನಿರ್ಧಾರ ಪ್ರಕಟಿಸಿದ್ದಾರೆ.
♦♦♦♦♦♦♦♦♦♦♦♦♦♦♦♦♦♦♦♦♦♦♦♦♦
ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?
ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ.







