ಮುಂಬೈಹೋಟೆಲೊಂದರಲ್ಲಿ ಅಗ್ನಿದುರಂತ ; 6 ಸಾವು

ಮುಂಬೈ, ಡಿ.21: ಮಹಾರಾಷ್ಟ್ರದ ಗೊಂಡಿಯಾದ ಹೋಟೆಲೊಂದರಲ್ಲಿ ಬೆಂಕಿ ದುರಂತದಿಂದಾಗಿ ಆರು ಮಂದಿ ಮೃತಪಟ್ಟಿದ್ದಾರೆ.
ಆರು ಅಂತಸ್ತಿನ ಬಿಂದಾಲ್ ಪ್ಲಾಝಾ ಹೋಟೆಲ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮದುವೆ ಸಮಾರಂಭಕ್ಕೆ ಹೋಟೆಲ್ ನಲ್ಲಿ ತಂಗಿದ್ದ ಕುಟುಂಬದ ಮೂವರು ಮೃತಪಟ್ಟವರಲ್ಲಿ ಸೇರಿದ್ದಾರೆ. ಹೋಟೆಲ್‌ನಲ್ಲಿ ಇನ್ನೂ ಹಲವರು ಸಿಕ್ಕಿ ಹಾಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗ್ಯಾಸ್ ಸಿಲಿಂಡರ‍್ ಸ್ಫೋಟಗೊಂಡು ಅಗ್ನಿ ದುರಂತ ಸಂಭವಿಸಿತು ಎಂದು ಪೊಲೀಸರು ತಿಳಿಸಿದ್ದಾರೆ, ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
♦♦♦♦♦♦♦♦♦♦♦♦♦♦♦♦♦♦♦♦♦♦♦♦♦
ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?
ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ.
Next Story





