ಹೆದ್ದಾರಿ ಯೋಜನಾಧಿಕಾರಿ ಜಯಚಂದ್ರ ಅವರಿಗೆ ಜ.4ರ ತನಕ ನ್ಯಾಯಾಂಗ ಬಂಧನ

ಬೆಂಗಳೂರು, ಡಿ.21: ಭ್ರಷ್ಟಚಾರ ಹಗರಣದಲ್ಲಿ ಸಿಬಿಐ ವಶದಲ್ಲಿದ್ದ ರಾಜ್ಯ ಹೆದ್ದಾರಿ ಅಭಿವೃದ್ಧಿ ನಿಗಮದ ಯೋಜನಾಧಿಕಾರಿ ಎಸ್.ಸಿ.ಜಯಚಂದ್ರ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯವು ಜನವರಿ 4ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಶುಕ್ರವಾರ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಜಯಚಂದ್ರ ಅವರನ್ನು ಬಾಡಿ ವಾರಂಟ್ ಮೂಲಕ ವಶಕ್ಕೆ ಪಡೆದಿದ್ದ ಸಿಬಿಐ ಅಧಿಕಾರಿಗಳು, ತೀವ್ರ ವಿಚಾರಣೆಯ ನಂತರ ಇಂದು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ , ನ್ಯಾಯಾಧೀಶ ಆರ್.ಬಿ.ಧರ್ಮೇಗೌಡ ಅವರುಆರೋಪಿಯಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕಳೆದ ವಾರ ಸಿಬಿಐ ವಿಶೇಷ ನ್ಯಾಯಾಲಯ ಜಯಚಂದ್ರ ಅವರಿಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಆದರೆ ನ್ಯಾಯಾಲಯದ ಷರತ್ತನ್ನು ಪಾಲಿಸಲು ಜಯಚಂದ್ರ ಅವರಿಗೆ ಸಾಧ್ಯವಾಗಿರಲಿಲ್ಲ. ಈ ಕಾರಣದಿಂದಾಗಿ , ಒಂದು ದಿನದ ಮಟ್ಟಿಗೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ನ್ಯಾಯಾಂಗ ಬಂಧನದಲ್ಲಿದ್ದ ಜಯಚಂದ್ರ ಅವರನ್ನು ಸಿಬಿಐ ಅಧಿಕಾರಿಗಳು ಕಪ್ಪುಹಣ ಬಿಳಿ ಮಾಡಿದ ಪ್ರಕರಣ ಮತ್ತು ಅಕ್ರಮ ಆಸ್ತಿ ಸಂಪಾದಿಸಿದ ಆರೋಪದಲ್ಲಿ ಹೆಚ್ಚಿನ ತನಿಖೆಗಾಗಿ ವಶಕ್ಕೆ ತೆಗೆದುಕೊಂಡಿದ್ದರು.ಜಯಚಂದ್ರ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
♦♦♦♦♦♦♦♦♦♦♦♦♦♦♦♦♦♦♦♦♦♦♦♦♦
ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?
ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ.





