Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮನೆಯನ್ನು ಖಾಲಿ ಬಿಟ್ಟು ಹೋಗುವ ಚಿಂತೆ...

ಮನೆಯನ್ನು ಖಾಲಿ ಬಿಟ್ಟು ಹೋಗುವ ಚಿಂತೆ ಬಿಟ್ಟು ಬಿಡಿ!

ದ.ಕ. ಜಿಲ್ಲಾ ಪೊಲೀಸರಿಂದ ವಿನೂತನ ಕ್ರಮ

ವಾರ್ತಾಭಾರತಿವಾರ್ತಾಭಾರತಿ21 Dec 2016 5:19 PM IST
share
ಮನೆಯನ್ನು ಖಾಲಿ ಬಿಟ್ಟು ಹೋಗುವ ಚಿಂತೆ ಬಿಟ್ಟು ಬಿಡಿ!

ಮಂಗಳೂರು, ಡಿ.21: ರಜಾ ದಿನಗಳಲ್ಲಿ ಮನೆ ಬಿಟ್ಟು ದೂರ ಪ್ರವಾಸ, ತೀರ್ಥಯಾತ್ರೆ, ಸಂಬಂಧಿಕರ ಮನೆಗೆ ಹೋಗಬೇಕೆಂದಿದ್ದೀರಾ? ಆದರೆ ಮನೆಯನ್ನು ಖಾಲಿ ಬಿಟ್ಟು ಹೋಗಲು ಧೈರ್ಯವಿಲ್ಲವೇ? ಚಿಂತೆ ಬೇಡ. ಮಂಗಳೂರು ನಗರ ಹಾಗೂ ದ.ಕ. ಜಿಲ್ಲಾ ಪೊಲೀಸ್ ಇದೀಗ ನಿಮ್ಮ ಸಹಾಯಕ್ಕಿದೆ.

ನೀವು ನಿಮ್ಮ ಮನೆಯನ್ನು ಒಂಟಿಯಾಗಿ ಬಿಟ್ಟು ದೂರದ ಊರುಗಳಿಗೆ, ಸಂಬಂಧಿಕರ ಮನೆಗೆ ಹೋಗುವಾಗ ನಿಮ್ಮ ಮನೆಗೆ ಜಿಲ್ಲಾಪೊಲೀಸ್ ‘ಗೃಹ ಸುರಕ್ಷಾ’ವನ್ನು ಒದಗಿಸಲಿದೆ.

ಹೌದು, ಹೀಗೊಂದು ವಿನೂತನ ಕ್ರಮವನ್ನು ಮಂಗಳೂರು ನಗರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಜಿಲ್ಲೆಯ ಜನತೆಗೆ ಒದಗಿಸುತ್ತಿದ್ದಾರೆ. ನೀವು ಮನೆಯನ್ನು ಖಾಲಿ ಬಿಟ್ಟು ಹೋಗಬೇಕೆಂದಿದ್ದರೆ ನಿಮ್ಮ ಮನೆಯ ವಿಳಾಸ, ಎಷ್ಟು ದಿನಗಳ ಕಾಲ ಮನೆಯಲ್ಲಿರುವುದಿಲ್ಲ ಎಂಬ ಮಾಹಿತಿಯನ್ನು ಹಾಗೂ ‘ಜಿಪಿಎಸ್ ಲೊಕೇಶನ್’ ನಿಮ್ಮ ವಾಟ್ಸಾಪ್ ಮೂಲಕ ದಕ್ಷಿಣ ಕನ್ನಡ ಪೊಲೀಸ್ ಕಂಟ್ರೋಲ್ ರೂಂಗೆ ವಾಟ್ಸಾಪ್ ನಂ.9480805300ಗೆ ಮಾಹಿತಿ ನೀಡಿ.

ಮಾಹಿತಿ ನೀಡುವ ಸರಳ ವಿಧಾನ ಇಲ್ಲಿದೆ ನೋಡಿ.

ರಾಜ್ಯದಲ್ಲಿಯೇ ಮೊದಲ ಬಾರಿಗೆ ಮಂಗಳೂರು ನಗರ ಮತ್ತು ದ.ಕ. ಜಿಲ್ಲಾ ಪೊಲೀಸ್ ಇಲಾಖೆ ಜಂಟಿಯಾಗಿ ‘ಗೃಹ ಸುರಕ್ಷಾ’ ಆ್ಯಪ್ ಮೂಲಕ ಮನೆ ಕಳ್ಳತನ, ದರೋಡೆ ಕಾರ್ಯಗಳಿಗೆ ಸೆಡ್ಡು ಹೊಡೆಯಲು ತಂತ್ರಾಂಶವನ್ನು ರೂಪಿಸಿದೆ.

ದ.ಕ. ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಗುಲಾಬ್ ರಾವ್ ಬೊರಸೆ ಹಾಗೂ ನಗರ ಪೊಲೀಸ್ ಆಯುಕ್ತ ಎಂ.ಚಂದ್ರಶೇಖರ್ ಮಾರ್ಗದರ್ಶನದಲ್ಲಿ ಈ ಆ್ಯಪ್ ತಯಾರಿಸಲಾಗಿದೆ. ದ.ಕ. ಜಿಲ್ಲಾ ಪೊಲೀಸ್‌ಹಾಗೂ ಮಂಗಳೂರುನಗರದಲ್ಲಿ ಈ ಆ್ಯಪ್ ಕಾರ್ಯಾಚರಿಸಲಿದೆ.

ಸಾರ್ವಜನಿಕರಿಗೆ ಈ ಆ್ಯಪ್ ಬಗ್ಗೆ ಮಾಹಿತಿ ನೀಡಲು ಪೊಲೀಸ್ ಇಲಾಖೆ ವಿಶೇಷ ಕಾಳಜಿಯನ್ನು ವಹಿಸಿದೆ. ಅದಕ್ಕಾಗಿ ಆ್ಯಪ್ ಕುರಿತಾದ ಮಾಹಿತಿಯನ್ನು ಕಿರು ಪ್ರಹಸನದ ವೀಡಿಯೊ ಮೂಲಕ ಜನಸಾಮಾನ್ಯರಿಗೆ ತಲುಪಿಸುವ ಪ್ರಯತ್ನವನ್ನೂ ಮಾಡುತ್ತಿದೆ.

ತಾಂತ್ರಿಕ ವಿಧಾನಗಳ ಬಗ್ಗೆ ಹೆಚ್ಚಿನ ಆಸಕ್ತಿ ಹಾಗೂ ಅನುಭವ ಹೊಂದಿರುವ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಗುಲಾಬ್ ರಾವ್ ಬೊರಸೆ ಈ ಹಿಂದೆ ಮಂಡ್ಯದಲ್ಲಿ ಎಸ್ಪಿಯಾಗಿದ್ದ ವೇಳೆ ವಾರಿಸುದಾರರಿಲ್ಲದ ವಾಹನ ಪತ್ತೆಗೆ ನೂತನ ಸಾಫ್ಟ್‌ವೇರ್ ಕಂಡು ಹಿಡಿದು ಅದರಲ್ಲಿ ಯಶಸ್ಸು ಕಂಡಿದ್ದರು. ಈ ತಂತ್ರಾಂಶವೀಗ ಗೋವಾ ಹಾಗೂ ಮಧ್ಯಪ್ರದೇಶ ರಾಜ್ಯಗಳಲ್ಲೂ ಅಳವಡಿಕೆಯಾಗಿದೆ. ಇದೀಗ ಪ್ರಾಮಾಣಿಕ ಹಾಗೂ ದಿಟ್ಟ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನಗರ ಪೊಲೀಸ್ ಆಯುಕ್ತ ಎಂ.ಚಂದ್ರಶೇಖರ್ ಅವರ ಸಲಹೆ, ಸೂಚನೆಯ ಮೇರೆಗೆ ಈ ಹೊಸ ಆ್ಯಪ್ ಸಿದ್ಧಗೊಳಿಸಿದ್ದಾರೆ.

ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ ಕಡಿಮೆಯಾಗುವ ಭರವಸೆ

‘‘ಆ್ಯಪ್ ಇಂದಿನಿಂದಲೇ ಕಾರ್ಯಾಚರಿಸಲಿದೆ. ಇದರಿಂದ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣಗಳು ಕಡಿಮೆಯಾಗುವ ನಿರೀಕ್ಷೆ ಹಾಗೂ ಭರವಸೆ ಇದೆ.’’

-ಭೂಷಣ್ ಗುಲಾಬ್ ರಾವ್ ಬೊರಸೆ, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X