Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಮುಖ್ಯಮಂತ್ರಿ ಆದರ್ಶಗ್ರಾಮ’ ಯೋಜನೆ...

‘ಮುಖ್ಯಮಂತ್ರಿ ಆದರ್ಶಗ್ರಾಮ’ ಯೋಜನೆ ಜಾರಿ: ಆಂಜನೇಯ

ವಾರ್ತಾಭಾರತಿವಾರ್ತಾಭಾರತಿ21 Dec 2016 7:11 PM IST
share
‘ಮುಖ್ಯಮಂತ್ರಿ ಆದರ್ಶಗ್ರಾಮ’ ಯೋಜನೆ ಜಾರಿ: ಆಂಜನೇಯ

►ಎಸ್ಸಿ-ಎಸ್ಟಿ ಹೆಚ್ಚಿರುವ ಗ್ರಾಮಗಳ ಸಮಗ್ರ ಅಭಿವೃದ್ಧಿ

►150 ಕೋಟಿ ರೂ.ವೆಚ್ಚ

►ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಅನುಷ್ಠಾನ

ಬೆಂಗಳೂರು, ಡಿ. 21: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನಸಂಖ್ಯೆ ಹೆಚ್ಚಿರುವ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ‘ಮುಖ್ಯಮಂತ್ರಿ ಆದರ್ಶಗ್ರಾಮ’ ಎಂಬ ಮಹತ್ವಾಕಾಂಕ್ಷೆ ಯೋಜನೆಯೊಂದನ್ನು ಜಾರಿಗೆ ತರಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಪ್ರಕಟಿಸಿದ್ದಾರೆ.

ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಎಸ್ಸಿ-ಎಸ್ಟಿ ಉಪ ಯೋಜನೆಯಡಿ ಒಟ್ಟು 150 ಕೋಟಿ ರೂ.ವೆಚ್ಚದಲ್ಲಿ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿಯ 100 ಹಾಗೂ ಪರಿಶಿಷ್ಟ ವರ್ಗದ 50 ಗ್ರಾಮಗಳು ಸೇರಿದಂತೆ ಒಟ್ಟು 150 ಗ್ರಾಮಗಳನ್ನು ಸಮಗ್ರ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಎಸ್ಸಿ-ಎಸ್ಟಿ ವರ್ಗದ ಜನರು ಶೇ.50ಕ್ಕಿಂತ ಹೆಚ್ಚಿನ ಜನಸಂಖ್ಯೆ ಇರುವ ಸುಮಾರು 2 ಸಾವಿರ ಗ್ರಾಮಗಳು ರಾಜ್ಯದಲ್ಲಿದ್ದು, ಆ ಪೈಕಿ 150 ಗ್ರಾಮಗಳನ್ನು ಆಯ್ಕೆ ಮಾಡಿ ತಲಾ 1ಕೋಟಿ ರೂ.ನಂತೆ ವೆಚ್ಚ ಮಾಡಿ ಆ ಗ್ರಾಮಗಳ ಸಮಗ್ರ ಅಭಿವೃದ್ಧಿಪಡಿಸುವ ಮೂಲಕ ‘ಮುಖ್ಯಮಂತ್ರಿ ಆದರ್ಶ ಗ್ರಾಮ’ವನ್ನಾಗಿ ಮಾಡಲಾಗುವುದು ಎಂದರು.

ಉದ್ದೇಶಿತ ಯೋಜನೆಯಡಿ ಪರಿಶಿಷ್ಟರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಗಳಿಗೆ ಶುದ್ಧ್ಧ ಕುಡಿಯುವ ನೀರು, ರಸ್ತೆ, ಒಳಚರಂಡಿ, ವಸತಿ, ವಿದ್ಯುತ್, ಸಮುದಾಯ ಭವನ, ಶಾಲಾ ಕಟ್ಟಡ ದುರಸ್ತಿ ಸೇರಿ ಇನ್ನಿತರ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಆಂಜನೇಯ ಮಾಹಿತಿ ನೀಡಿದರು.

ಮುಖ್ಯಮಂತ್ರಿ ಆದರ್ಶ ಗ್ರಾಮ ಯೋಜನೆಯನ್ನು ಎಸ್ಟಿಪಿ-ಟಿಎಸ್ಪಿ ಯೋಜನೆ ಅನುದಾನದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ಯೋಜನೆ ಅನುಷ್ಠಾನಗೊಳಿಸಲು ರಾಜ್ಯ ಪರಿಷತ್‌ನಲ್ಲಿ ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಪಿಎಂ ಆದರ್ಶ ಗ್ರಾಮ: ಕೇಂದ್ರ ಸರಕಾರ ಗ್ರಾಮೀಣಾಭಿವೃದ್ಧಿ ಇಲಾಖೆ ಮೂಲಕ ಪ್ರಧಾನ ಮಂತ್ರಿ ಆದರ್ಶಗ್ರಾಮ ಯೋಜನೆ ಅನುಷ್ಠಾನಕ್ಕೆ 40 ಕೋಟಿ ರೂ.ಬಿಡುಗಡೆ ಮಾಡಿದೆ. ಸದರಿ ಯೋಜನೆಗೆ ರಾಜ್ಯ ಸರಕಾರವೂ 40 ಕೋಟಿ ರೂ.ವೆಚ್ಚ ಮಾಡುತ್ತಿದೆ ಎಂದು ಅವರು ಹೇಳಿದರು.

ತಮ್ಮ ಅಧ್ಯಕ್ಷತೆಯಲ್ಲಿ ರಾಜ್ಯ ಮಟ್ಟದ ಸಲಹಾ ಸಮಿತಿ ರಚನೆ ಮಾಡಿದ್ದು, ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್ ಉಪಾಧ್ಯಕ್ಷರಾಗಿರುತ್ತಾರೆ. ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಸುಭಾಶ್ ಕುಂಠಿಯಾ ನೇತೃತ್ವದಲ್ಲಿ ಉಸ್ತುವಾರಿ ಸಮಿತಿ ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿದರು.

ಪಿಎಂ ಆದರ್ಶಗ್ರಾಮ ಯೋಜನೆಯಡಿ ಚಿತ್ರದುರ್ಗ, ಕೋಲಾರ, ಮೈಸೂರು, ಕಲಬುರಗಿ, ಚಾಮರಾಜನಗರ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಎಸ್ಸಿ-ಎಸ್ಟಿ ವರ್ಗದ ಜನರು ಶೇ.50ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ 200 ಗ್ರಾಮಗಳನ್ನು ಆಯ್ಕೆ ಮಾಡಿ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಉದ್ದೇಶಿತ ಯೋಜನೆಯಡಿ ಪ್ರತಿ ಗ್ರಾಮಕ್ಕೆ ಕೇಂದ್ರ ಹಾಗೂ ರಾಜ್ಯ ಸರಕಾರದ ಶೇ.50ರ ಅನುಪಾತದಲ್ಲಿ ಒಟ್ಟು 40 ಲಕ್ಷ ರೂ.ನಂತೆ 200 ಗ್ರಾಮಗಳಿಗೆ ಒಟ್ಟಾರೆ 80 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದು ಎಂದ ಅವರು, ಎಸ್ಸಿ-ಎಸ್ಟಿ ವರ್ಗದ ಜನರು ವಾಸಿಸುವ ಗ್ರಾಮಗಳನ್ನು ಆದರ್ಶ ಗ್ರಾಮಗಳನ್ನಾಗಿ ಪರಿವರ್ತಿಸಲಾಗುವುದು ಎಂದರು.

ಉಡುಪಿಯ ಮುರೂರು ಕೊರಗರ ಹಾಡಿಯಲ್ಲಿ ಡಿ.31ಕ್ಕೆ ಸಚಿವ ಎಚ್.ಆಂಜನೇಯ ವಾಸ್ತವ್ಯ

ನೂತನ ವರ್ಷವನ್ನು ಸ್ವಾಗತಿಸಲು ಡಿ.31ರಂದು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರು ವಿಧಾನಸಭಾ ಕ್ಷೇತ್ರದ ಕಲ್ತೋಡು ಪಂಚಾಯ್ತಿಯ ಮುರೂರು ಕೊರಗರ ಹಾಡಿಯಲ್ಲಿ ವಾಸ್ತವ್ಯ ಹೂಡಲಿದ್ದೇನೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಐಷಾರಾಮಿ ತಾಣಗಳಲ್ಲಿ ಮೋಜು, ಅದ್ದೂರಿ ಸಂಭ್ರಮದ ಮೂಲಕ ನೂತನ ವರ್ಷಾಚರಣೆ ಮಾಡಲಾಗುತ್ತಿದೆ. ಆದರೆ, ತಾನು ನಿರ್ಗತಿಕರು, ವಸತಿಹೀನರು ಹಾಗೂ ಗಿರಿಜನಗರ ಹಾಡಿಯಲ್ಲಿ ವಾಸ್ತವ್ಯ ಹೂಡಲು ನಿರ್ಧರಿಸಿದ್ದೇನೆ.

ಅಲ್ಲದೆ, ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೆ ಜಿಲ್ಲಾಡಳಿತ ಮತ್ತು ಇಲಾಖೆ ಅಧಿಕಾರಿಗಳೊಂದಿಗೆ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳುವ ಮೂಲಕ ಬಡ ಜನರಿಗೆ ನೂತನ ವರ್ಷದ ಉಡುಗೊರೆ ಮತ್ತು ಶುಭಾಶಯಗಳನ್ನು ಹೇಳುವ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಲು ಹೊರಟಿದ್ದೇನೆ ಎಂದು ಹೇಳಿದರು.

ಇಷ್ಟೇ ಅಲ್ಲದೆ ಅರಣ್ಯಗಳ ಅಂಚಿನಲ್ಲಿ ಪಶು-ಪಕ್ಷಿಗಳಂತೆ ವಾಸಿಸುವ ಬುಡಕಟ್ಟು ಜನರ ಗುಡಿಸಲಿಗೆ ರಾಜ್ಯ ಸರಕಾರವನ್ನು ಕೊಂಡೊಯ್ಯುತಿರುವುದು ಮತ್ತೊಂದು ವಿಶೇಷ ಎಂದ ಅವರು, ಉಡುಪಿ ಜಿಲ್ಲೆಯಿಂದ 80 ಕಿ.ಮೀ ದೂರದಲ್ಲಿರುವ ಮುರೂರು ಕೊರಗರ ಹಾಡಿಯಲ್ಲಿ ಹತ್ತು ಕುಟುಂಬಗಳ 45ರಿಂದ 50 ಮಂದಿ ವಾಸಿಸುತ್ತಿದ್ದಾರೆ. ಮರ್ಲಿ ಮತ್ತು ಮರ್ಲ ಕೊರಗ ದಂಪತಿ ಮನೆಯಲ್ಲಿ ತಾನು ವಾಸ್ತವ್ಯ ಹೂಡಲಿದ್ದೇನೆ ಎಂದು ಮಾಹಿತಿ ನೀಡಿದರು.

ಆದಿವಾಸಿಗಳಿಗೆ ಪುನರ್ವಸತಿ: ಕೊಡಗು ಜಿಲ್ಲೆ ದಿಡ್ಡಳ್ಳಿ ಆದಿವಾಸಿಗಳಿಗೆ ಪುನರ್ ವಸತಿ ಕಲ್ಪಿಸಲು ಈಗಾಗಲೇ 13ಎಕರೆ ಭೂಮಿಯನ್ನು ಗುರುತಿಸಿದ್ದು, ಸರಕಾರದಿಂದ ಅವರಿಗೆ ಮನೆ ನಿರ್ಮಿಸಿಕೊಡಲಾಗುವುದು. ಅಲ್ಲದೆ, ಭೂಮಿಯನ್ನು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆಂಜನೇಯ ಹೇಳಿದರು.

ಡಿ.23ರಂದು ತಾನು ದಿಡ್ಡಳ್ಳಿಗೆ ಜಿಲ್ಲಾಡಳಿತ ಮತ್ತು ಇಲಾಖೆ ಅಧಿಕಾರಿಗಳ ಜತೆ ಸ್ಥಳಕ್ಕೆ ಭೇಟಿ ನೀಡಲಿದ್ದು, ಆದಿವಾಸಿಗಳ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೆ ಪರಿಹಾರ ಕಲ್ಪಿಸಲು ಕ್ರಮ ವಹಿಸುವೆ ಎಂದ ಅವರು, ರಾಜ್ಯದಲ್ಲಿ ಅರಣ್ಯವಾಸಿಗಳನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸುವುದಿಲ್ಲ. ಅರಣ್ಯ ಹಕ್ಕುಗಳ ಕಾಯ್ದೆಯನ್ನು ಕಾಂಗ್ರೆಸ್ ಸರಕಾರ ಜಾರಿಗೆ ತಂದಿದೆ ಎಂದು ಪ್ರಶ್ನೆಯೊಂದಕ್ಕೆ ಸ್ಪಷ್ಟಣೆ ನೀಡಿದರು.

ಆದಿವಾಸಿಗಳಿಗೆ ಮನೆ ನಿರ್ಮಿಸಿಕೊಡಲು ಇಲಾಖೆಯಲ್ಲಿ ಯಾವುದೇ ರೀತಿಯ ಹಣಕಾಸಿನ ಕೊರತೆ ಇಲ್ಲ. ಖಾಸಗಿ ಬಡಾವಣೆಗಳ ಮಾದರಿಯಲ್ಲೆ ದಿಡ್ಡಳ್ಳಿ ಆದಿವಾಸಿಗಳಿಗೆ ವಸತಿ, ಶಿಕ್ಷಣ ಸೇರಿದಂತೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಆಂಜನೇಯ ಘೋಷಿಸಿದರು.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X