Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಶೆಡ್ಡೆ ಮಹಿಳೆಯ ಕೊಲೆ: ಅಪರಾಧ...

ಮೂಡುಶೆಡ್ಡೆ ಮಹಿಳೆಯ ಕೊಲೆ: ಅಪರಾಧ ಸಾಬೀತು

ವಾರ್ತಾಭಾರತಿವಾರ್ತಾಭಾರತಿ21 Dec 2016 7:44 PM IST
share

ಮಂಗಳೂರು, ಡಿ. 21: ಮೂಡುಶೆಡ್ಡೆ ಕೆರಮಾ ರಸ್ತೆಯ ನಿಸರ್ಗಧಾಮ ಕ್ವಾಟರ್ಸ್‌ನಲ್ಲಿ 5 ವರ್ಷಗಳ ಹಿಂದೆ ಮಹಿಳೆಯ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿಹಚ್ಚಿ ಕೊಲೆಗೈದ ಪ್ರಕರಣದ ಆರೋಪಿ ರಾಜ (44)ನ ಅಪರಾಧವು ಮಂಗಳೂರಿನ 2ನೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಶಿಕ್ಷೆಯ ಪ್ರಮಾಣ ಶೀಘ್ರ ಪ್ರಕಟಗೊಳ್ಳಲಿದೆ.

ನಗರದಲ್ಲಿ ಚಪ್ಪಲಿ ರಿಪೇರಿ ಮತ್ತು ಮಾರಾಟ ಕೆಲಸ ಮಾಡುತ್ತಿದ್ದ ರಾಜನ ವಿವಾಹ 1994 ಫೆ.19ರಂದು ರಾಣಿ ಎಂಬಾಕೆಯ ಜತೆ ನಡೆದಿದ್ದು, ಈ ದಂಪತಿಗೆ ಮೂವರು ಮಕ್ಕಳಿದ್ದರು. ಆ ಬಳಿಕ ರಾಜ ತನ್ನ ಪತ್ನಿಯ ಶೀಲ ಶಂಕಿಸಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. 2011ರ ಸೆ.1ರಂದು ಮನೆಯ ಒಳಗೆ ರಾಜ ತನ್ನ ಪತ್ನಿ ರಾಣಿಯ ಮೈಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದ. ಪ್ರಾಣಭಯದಿಂದ ಆಕೆ ಮನೆಯಿಂದ ಹೊರ ಬಂದಾಗ ರಾಜ ಪತ್ನಿಯ ಮೈಗೆ ನೀರು ಹಾಕಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದ. ಆವಾಗ ಆತನಿಗೂ ಕೆಲವು ಸುಟ್ಟ ಗಾಯಗಳಾಗಿದ್ದವು. ಬಳಿಕ ಸ್ಥಳೀಯರು ಆಕೆಯನ್ನು ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರು. ರಾಜ ಕೂಡ ಚಿಕಿತ್ಸೆ ಪಡೆದಿದ್ದನು.

  ಸೆ.4ರಂದು ಪ್ರಜ್ಞೆ ಬಂದ ಬಳಿಕ ಕಾವೂರು ಎಸ್ಸೈ ಕೆ. ಗೋಪಾಲ್‌ರ ಮುಂದೆ ರಾಣಿ ಹೇಳಿಕೆ ನೀಡಿದ್ದಳು. ಅದರಂತೆ ಪೊಲೀಸರು ಆರೋಪಿ ರಾಜನ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿದ್ದರು. ಸೆ.8ರಂದು ರಾಣಿ ಚಿಕಿತ್ಸೆ ಲಕಾರಿಯಾಗದೆ ಮೃತಪಟ್ಟಿದ್ದಳು. ಪೊಲೀಸರು ರಾಜನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದರು. ಹಾಗೇ ಆಸ್ಪತ್ರೆಯಿಂದ ತಲೆಮರೆಸಿದ್ದ ಆರೋಪಿಯನ್ನು ಸೆ.19ರಂದು ಬಂಧಿಸಲಾಗಿತ್ತು. ಅಂದಿನ ಇನ್‌ಸ್ಪೆಕ್ಟರ್ ವೆಲೆಂಟೈನ್ ಡಿಸೋಜ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

 ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದ ರಾಜ ತನಗೆ ಶಿಕ್ಷೆಯಾಗುವುದು ಖಚಿತವಾಗುತ್ತಿದ್ದಂತೆ ಕಳೆದ 1 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಹಾಗಾಗಿ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. 2016ರ ಸೆ.30ರಂದು ರಾಜನನ್ನು ಕಾವೂರು ಪೊಲೀಸರು ಬಂಧಿಸಿದ್ದರು.

ಇದೀಗ 2ನೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಸರ್ವೋದಯ ಶೆಟ್ಟಿಗಾರ್ ಐಪಿಸಿ ಸೆಕ್ಷನ್ 498 ಎ (ಪತ್ನಿಗೆ ಕಿರುಕುಳ) ಮತ್ತು 302 (ಕೊಲೆ ಆರೋಪ) ಅನ್ವಯ ಆರೋಪಿ ರಾಜನ ವಿರುದ್ಧದ ಆರೋಪ ಸಾಬೀತಾಗಿದೆ ಎಂಬ ತೀರ್ಮಾನಕ್ಕೆ ಬಂದಿದ್ದಾರೆ.

*ಡೈಯಿಂಗ್ ಡಿಕ್ಲರೇಶನ್

   ಮೃತ ರಾಣಿ ಆಸ್ಪತ್ರೆಯಲ್ಲಿದ್ದಾಗ ಪೊಲೀಸರಿಗೆ ನೀಡಿದ ಹೇಳಿಕೆಯನ್ನು ನ್ಯಾಯಾಲಯವು ಡೈಯಿಂಗ್ ಡಿಕ್ಲರೇಶನ್ (ಮರಣ ಪೂರ್ವ ಹೇಳಿಕೆ) ಆಗಿ ಪರಿಗಣಿಸಿದೆ. ಆಕೆಯ ಮನೆಯ ಆಕ್ಕ ಪಕ್ಕದ ಜನರು 2010ರಲ್ಲಿ ಕಾವೂರು ಪೊಲೀಸರಿಗೆ ಸಲ್ಲಿಸಿದ ದೂರು ಮತ್ತು 2011ರಲ್ಲಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಸಂದರ್ಭ ಅದೇ ಜನರು ಮತ್ತೆ ಆಗಮಿಸಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲು ನೆರವಾಗಿತ್ತು. ವಿಚಾರಣೆ ಸಂದರ್ಭ ಈ ಜನರು ಕೂಡ ಸಾಕ್ಷಿ ಹೇಳಿದ್ದರು.ಹಾಗೆ ರಾಣಿಯ ಡೈಯಿಂಗ್ ಡಿಕ್ಲರೇಶನ್, ಊರಿನ ಜನರ ಸಾಕ್ಷಿ ಮತ್ತು ವೆನ್‌ಲಾಕ್ ಆಸ್ಪತ್ರೆಯ ವೈದಾಧಿಕಾರಿ ಡಾ. ಜೂಲಿಯಾನಾ ಸಲ್ದಾನ್ಹಾ ವೈದ್ಯಕೀಯ ಪ್ರಮಾಣ ಪತ್ರವನ್ನು ಪರಿಗಣಿಸಿ ನ್ಯಾಯಾಲಯವು ಆರೋಪಿ ರಾಜ ಅಪರಾಧಿ ಎಂಬ ತೀರ್ಮಾನಕ್ಕೆ ಬಂದಿದೆ.

*ಆರೋಪಿ ಹೇಳಿಕೆಗೆ ನಕಾರ

 ಆರೋಪಿ ರಾಜ ಪ್ರಾರಂಭದಲ್ಲಿ ‘ಪತ್ನಿಯೇ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದಳು’ ಎಂಬ ಹೇಳಿಕೆ ನೀಡಿದ್ದರೆ ಸಾಕ್ಷಿ ವಿಚಾರಣೆಯ ವೇಳೆ ‘ಅಡುಗೆ ಮಾಡುವಾಗ ಬೆಂಕಿ ತಗುಲಿತು’ ಎಂಬ ಹೇಳಿಕೆ ನೀಡಿದ್ದನು. ಹಾಗೆ ಆತ ಎರಡು ವ್ಯತ್ಯಸ್ತ ಹೇಳಿಕೆಗಳನ್ನು ನೀಡಿದ್ದರಿಂದ ನ್ಯಾಯಾಲಯ ಆತನ ಹೇಳಿಕೆಯನ್ನು ಪರಿಗಣಿಸಿಲ್ಲ. ರಾಜ- ರಾಣಿ ಮೂವರು ಮಕ್ಕಳಲ್ಲಿ ಹಿರಿಯ ಪುತ್ರ ತಂದೆ ರಾಜನ ಜತೆಗಿದ್ದರೆ ಉಳಿದಿಬ್ಬರು ಮಕ್ಕಳು ರಾಣಿಯ ಸಂಬಂಧಿಕರ ಮನೆಯಲ್ಲಿದ್ದಾರೆ. ಹಿರಿಯ ಪುತ್ರನು ವಿಚಾರಣೆಯ ವೇಳೆ ತಂದೆಯ ಪರವಾಗಿ ಸಾಕ್ಷಿ ಹೇಳಿದ್ದಾನೆ.

  ಈ ಪ್ರಕರಣದಲ್ಲಿ ಪ್ರಾಸಿಕ್ಯೂಶನ್ ಪರವಾಗಿ ಪ್ರಾರಂಭಿಕ ಹಂತದಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ. ಶಿವ ಪ್ರಸಾದ್ ಆಳ್ವ ಮತ್ತು ಬಳಿಕ ಬಿ. ಶೇಖರ ಶೆಟ್ಟಿ ವಾದ ಮಂಡಿಸಿದ್ದರು.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X