Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೌರ್ಜನ್ಯ ಎಸಗಿದ ಅಧಿಕಾರಿಗಳಿಗೆ ನೋಟಿಸ್:...

ದೌರ್ಜನ್ಯ ಎಸಗಿದ ಅಧಿಕಾರಿಗಳಿಗೆ ನೋಟಿಸ್: ಮಹಿಳಾ ಆಯೋಗ

ದಿಡ್ಡಳ್ಳಿ ಗುಡಿಸಲು ತೆರವು ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ21 Dec 2016 10:33 PM IST
share
ದೌರ್ಜನ್ಯ ಎಸಗಿದ ಅಧಿಕಾರಿಗಳಿಗೆ ನೋಟಿಸ್: ಮಹಿಳಾ ಆಯೋಗ

ಮಡಿಕೇರಿ, ಡಿ.21: ದಿಡ್ಡಳ್ಳಿಯಲ್ಲಿ ಗುಡಿಸಲುಗಳ ತೆರವು ಕಾರ್ಯಾಚರಣೆ ಸಂದರ್ಭ ಅರಣ್ಯ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಆದಿವಾಸಿಗಳ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು, ದೌರ್ಜನ್ಯ ನಡೆಸಿದ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುವುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಬಾಯಿ ತಿಳಿಸಿದ್ದಾರೆ.

ಗುಡಿಸಲುಗಳ ತೆರವು ಕಾರ್ಯಾಚರಣೆ ಹಾಗೂ ಬೆತ್ತಲೆ ಪ್ರತಿಭಟನೆ ನಡೆದು 14 ದಿನ ಕಳೆದ ಬಳಿಕ ಎಚ್ಚೆತ್ತುಕೊಂಡ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಬುಧವಾರ ದಿಡ್ಡಳ್ಳಿಗೆ ಭೇಟಿ ನೀಡಿ ನಿರಾಶ್ರಿತರ ಅಳಲು ಆಲಿಸಿದರು.

ಬಳಿಕ ಮಾತನಾಡಿದ ಅವರು, ಹೋರಾಟಗಾರರು ಬೆತ್ತಲೆ ಪ್ರತಿಭಟನೆ ನಡೆಸಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿದರು. ಈ ರೀತಿಯ ಬೆಳವಣಿಗೆ ರಾಜ್ಯದಲ್ಲಿ ನಡೆಯಬಾರದಾಗಿತ್ತು ಎಂದ ಅವರು, ನಿರಾಶ್ರಿತರಾದವರಿಗೆ ಆಹಾರ, ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.

ಆದಿವಾಸಿಗಳ ಸಂಕಷ್ಟದ ಬದುಕಿನ ಬಗ್ಗೆ ಸಂಬಂಧಿಸಿದ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಡಿ.7ರಂದು ಬೆತ್ತಲೆ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮುತ್ತಮ್ಮ, ತಮ್ಮ ಜನಾಂಗದ ಮೇಲಾಗುತ್ತಿರುವ ಅನ್ಯಾಯಗಳನ್ನು ನಾಗಲಕ್ಷ್ಮೀ ಅವರಲ್ಲಿ ಅಲವತ್ತು ಕೊಂಡರು.

ಯರವ, ಜೇನು ಕುರುಬ, ಕಾಡು ಕುರುಬ, ಪಣಿಯ, ಪಂಜರಿ ಮೂಲ ನಿವಾಸಿ ಬುಡಕಟ್ಟು ಜನರು ನಿವೇಶನ ಹಾಗೂ ವಸತಿ ಇಲ್ಲದೆ ನಿರ್ಗತಿಕರಾಗಿದ್ದೇವೆ. ಅನಾದಿಕಾ ಲದಿಂದಲೂ ವಾಸ ಮಾಡುತ್ತಿದ್ದ ದಿಡ್ಡಳ್ಳಿಯಲ್ಲಿಯೇ ಶಾಶ್ವತ ಮರು ನಿವೇಶನ ಹಾಗೂ ವಸತಿ ಕಲ್ಪಿಸಬೇಕು ಎಂದು ಮುತ್ತಮ್ಮ ಮನವಿ ಮಾಡಿದರು.

ಈ ಹಿಂದೆ ಲೈನ್‌ಮನೆಗಳಲ್ಲಿ ವಾಸ ಮಾಡುತ್ತಿದ್ದೆವು. ಅಲ್ಲದೆ, ಜೀತ ಪದ್ಧತಿಯಿಂದ ಹೊರ ಬರಲು ಸಾಧ್ಯವಾಗುತ್ತಿಲ್ಲ. ಜಿಲ್ಲೆಯಲ್ಲಿ 4 ಸಾವಿರ ಕುಟುಂಬಗಳು ಜೀತ ಪದ್ಧತಿಯ ಕಬಂಧ ಬಾಹುವಿಗೆ ಸಿಲುಕಿ ನಲುಗಿಹೋಗಿವೆ. ಇದರಿಂದಾಗಿ ಸರಕಾರದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಶೀಘ್ರ ದಿಡ್ಡಳ್ಳಿ ಭಾಗದಲ್ಲಿಯೇ ಶಾಶ್ವತ ನೆಲೆ ಕಲ್ಪಿಸಬೇಕು. ಈ ಭಾಗದಲ್ಲಿ ರಸ್ತೆ ಸಂಪರ್ಕ, ಕುಡಿಯುವ ನೀರು, ವಿದ್ಯುತ್ ಸಂಪರ್ಕ, ವಸತಿ ಶಾಲೆ ಮತ್ತಿತರ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಮುತ್ತಮ್ಮ ಒತ್ತಾಯಿಸಿದರು.

ಚೆನ್ನಂಗಿ, ಮಾಲ್ದಾರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಕಾನೂನು ಸುವ್ಯವಸ್ಥೆ, ಆಂತರಿಕ ಭದ್ರತೆ, ಬುಡಕಟ್ಟು ಜನಾಂಗದ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ದಿಡ್ಡಳ್ಳಿಯ ನಿರಾಶ್ರಿತರು ವಾಸ್ತವ್ಯ ಹೂಡಿರುವ ಆಶ್ರಮ ಶಾಲೆಯ ಸುತ್ತ ಮುತ್ತಲ ಚೆನ್ನಂಗಿ ಮತ್ತು ಮಾಲ್ದಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಡಿ.21ರ ಮಧ್ಯಾಹ್ನ 2ಗಂಟೆ ಯಿಂದ ಡಿ.24 ಬೆಳಗ್ಗೆ 6 ಗಂಟೆಯ ವರೆಗೆ ಕಲಂ 144 ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿ ಸೋಜಾ ತಿಳಿಸಿದ್ದಾರೆ.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X