ಗಂಜಿಮಠ: ರಸ್ತೆ ಅಪಘಾತಕ್ಕೆ ಯುವಕ ಬಲಿ

ಮಂಗಳೂರು, ಡಿ.22: ನಗರ ಹೊರವಲಯದ ಗಂಜಿಮಠದಲ್ಲಿ ಬೈಕ್‌ಗೆ ಟಿಪ್ಪರ್ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾದ ದುರ್ಘಟನೆ ಗುರುವಾರ ಅಪರಹ್ನ ನಡೆದಿದೆ.
ಕಿಕನ್ನಿಗೋಳಿ ಸಮೀಪದ ಶಿರ್ತಾಡಿ ರಾಮಣ್ಣ ಪೂಜಾರಿ ಎಂಬವರ ಪುತ್ರ ಸಂತೋಷ್ ಪೂಜಾರಿ (25) ಮೃತಪಟ್ಟ ಬೈಕ್ ಸವಾರ. ಈತ ಗಂಜಿಮಠ ಮುಖ್ಯರಸ್ತೆಯಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಲಿಸಿಕೊಂಡು ಬಂದ ಟಿಪ್ಪರ್ ಢಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸವಾರ ಸ್ಥಳದಲ್ಲೇ ಕೊನೆಯುಸಿರಳೆದಿದ್ದಾರೆ. ಆರೋಪಿ ಚಾಲಕ ಟಿಪ್ಪರ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Next Story





