Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾರ್ವೆಯಲ್ಲಿ ಭಾರತೀಯ ದಂಪತಿಯ ಮಗು ವಶ:...

ನಾರ್ವೆಯಲ್ಲಿ ಭಾರತೀಯ ದಂಪತಿಯ ಮಗು ವಶ: ವರದಿ ಕೇಳಿದ ಸುಶ್ಮಾ

ವಾರ್ತಾಭಾರತಿವಾರ್ತಾಭಾರತಿ22 Dec 2016 7:08 PM IST
share
ನಾರ್ವೆಯಲ್ಲಿ ಭಾರತೀಯ ದಂಪತಿಯ ಮಗು ವಶ: ವರದಿ ಕೇಳಿದ ಸುಶ್ಮಾ

ಹೊಸದಿಲ್ಲಿ, ಡಿ.22: ಅನ್ಯಾಯ ಮಾಡಿದ್ದಾರೆಂಬ ಕ್ಷುಲ್ಲಕ ದೂರಿನ ಮೇಲೆ ತಮ್ಮ ಐದರ ಹರೆಯದ ಮಗುವನ್ನು ನಾರ್ವೆಯ ಅಧಿಕಾರಿಗಳು ಕೊಂಡೊಯ್ದಿದ್ದಾರೆಂಬ ಭಾರತೀಯ ದಂಪತಿಯೊಂದರ ಆರೋಪದ ಬಗ್ಗೆ ವರದಿಯೊಂದನ್ನು ನೀಡುವಂತೆ ನಾವೆಯ ಭಾರತೀಯ ರಾಯಭಾರಿಗೆ ವಿದೇಶಾಂಗ ಸಚಿವೆ ಸುಶ್ಮಾ ಸ್ವರಾಜ್ ಇಂದು ಆದೇಶಿಸಿದ್ದಾರೆ.

ವರದಿಯೊಂದನ್ನು ತನಗೆ ಕಳುಹಿಸುವಂತೆ ನಾರ್ವೆಯ ಭಾರತೀಯ ರಾಯಭಾರಿಗೆ ಸೂಚಿಸಿದ್ದೇನೆಂದು ಸುಶ್ಮಾ ಟ್ವೀಟಿಸಿದ್ದಾರೆ.

ತಮ್ಮ ಮಗುವನ್ನು ಮರಳಿ ಪಡೆಯಲು ದಂಪತಿ ಬಿಜೆಪಿ ನಾಯಕ ವಿಜಯ್ ಜಾಲಿಯವರ ನೆರವು ಕೋರಿದ್ದರು. ವಿಜಯ್, ಈ ಬಗ್ಗೆ ಸುಶ್ಮಾ ಹಾಗೂ ನಾರ್ವೆಯ ಭಾರತೀಯ ರಾಯಭಾರಿಗೆ ಪತ್ರ ಬರೆದಿದ್ದರು.

ಓಸ್ಲೊದಲ್ಲಿರುವ ತಮ್ಮ ದೂತಾವಾಸದ ಅಧಿಕಾರಿಗಳು ಬಾಲಕನ ತಂದೆ ಅನಿಲ್ ಶರ್ಮ ಎಂಬವರಲ್ಲಿ ಮಾತನಾಡಿದ್ದು, ಸಂಪೂರ್ಣ ಬೆಂಬಲ ನೀಡಿದ್ದಾರೆ. ಆದಾಗ್ಯೂ, ಪ್ರಕರಣದಲ್ಲಿ ವ್ಯವಹರಿಸಲು ತಾನು ವಕೀಲರೊಬ್ಬರನ್ನು ಗೊತ್ತು ಮಾಡಿದ್ದೇನೆಂದು ಶರ್ಮಾ ದೂತಾವಾಸಕ್ಕೆ ಮಾಹಿತಿ ನೀಡಿದ್ದಾರೆಂದು ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣದ ಬಗ್ಗೆ ನಿನ್ನೆ ಸಂಜೆ ದೂತಾವಾಸಕ್ಕೆ ತಿಳಿಯಿತು. ತಮಗೆ ಹೆಚ್ಚಿನ ಮಾಹಿತಿ ನೀಡುವಂತೆ ನಾರ್ವೆಯ ಸಂಬಂಧಿತ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಅವರ ಉತ್ತರವನ್ನು ಕಾಯುತ್ತಿದ್ದೇವೆಂದು ಭಾರತದಲ್ಲಿರುವ ನಾರ್ವೆ ದೂತಾವಾಸದ ಅಧಿಕಾರಿಗಳು ಹೇಳಿದ್ದಾರೆ.

ಆಧಾರ ರಹಿತ ಹಾಗೂ ಕಲ್ಪಿತ ದೂರಿನ ಮೇಲೆ ನಾರ್ವೆಯ ಮಕ್ಕಳ ಕಲ್ಯಾಣ ಇಲಾಖೆ ಡಿ.13ರಂದು ಓಸ್ಲೊದಲ್ಲಿ ಬಾಲಕ ಆರ್ಯನ್ ಎಂಬಾತನನ್ನು ಬಲಾತ್ಕಾರವಾಗಿ ವಶಕ್ಕೆ ಪಡೆದಿರುವ ಕುರಿತು ವಿಜಯ್ ಜಾಲಿ, ಭಾರತೀಯ ರಾಯಭಾರಿ ದೇವರಾಜ್ ಪ್ರಧಾನ್‌ರಿಗೆ ಬರೆದಿದ್ದ ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದ್ದರು. ಶರ್ಮಾ ‘ಬಿಜೆಪಿಯ ಸಾಗರೋತ್ತರ ಮಿತ್ರರು’ ಸಂಘಟನೆಯ ಸದಸ್ಯರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X