ಇರ್ವತ್ತೂರು: ಕೆರೆಗೆ ಬಿದ್ದು ಮಹಿಳೆ ಸಾವು
ಬಂಟ್ವಾಳ, ಡಿ. 22: ತಾಲೂಕಿನ ಇರ್ವತ್ತೂರು ಗ್ರಾಮದ ಬಡಟು ಎಂಬಲ್ಲಿ ಮಹಿಳೆಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಕೆರೆ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.
ಇಲ್ಲಿನ ನಿವಾಸಿ ಬಾಳಪ್ಪ ಪೂಜಾರಿ ಎಂಬವರ ಪತ್ನಿ ಚಂದ್ರಾವತಿ (57) ಮೃತ ಮಹಿಳೆ. ಇವರು ಬುಧವಾರ ಮಧ್ಯಾಹ್ನ ಮನೆ ಸಮೀಪದ ಅಡಿಕೆ ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎಂದು ಪುಂಜಾಲಕಟ್ಟೆ ಠಾಣೆ ಪೊಲೀಸರು ತಿಳಿಸಿದ್ದಾರೆ.
Next Story





