ವಿದ್ಯಾರ್ಥಿಗಳಿಗೆ ಸ್ಪರ್ಧೆ

ಮಲ್ಪೆ, ಡಿ.22: ಮಲ್ಪೆ ಪ್ಲವರ್ಸ್ ಆಫ್ ಪ್ಯಾರಡೈಸ್ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿಗಳಿಗೆ ‘ಸೇವ್ ಅರ್ಥ್, ಸೇವ್ ಎನರ್ಜಿ’ ಕಾರ್ಯಕ್ರಮವನ್ನು ಇತ್ತೀಚೆಗೆ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮಕ್ಕಳಿಗಾಗಿ ಮರಳು ಶಿಲ್ಪಕಲೆ ಮತ್ತು ಚಿತ್ರ ಬಿಡಿಸುವ ಸ್ಪರ್ಧೆಯನ್ನು ನಡೆಸಲಾಯಿತು. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ಇಂಧನ ಉಳಿಸುವಿಕೆಯ ಬಗ್ಗೆ ಸಂವಾದ ಕಾರ್ಯಕ್ರಮ ಜರಗಿತು.
Next Story





