ಜಿಂಕೆ ಮಾಂಸ ವಶ: ಆರೋಪಿಗಳು ಪರಾರಿ
ಭಟ್ಕಳ, ಡಿ.22: ಯಾವುದೇ ಪರವಾನಿಗೆಯಿಲ್ಲದೆ ಅಕ್ರಮವಾಗಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಮತ್ತು ಕಡವೆಯನ್ನು ಕೊಂದು ಅದರ ಮಾಂಸವನ್ನು ವಾಹನದಲ್ಲಿ ಸಾಗಣೆ ಮಾಡುತ್ತಿದ್ದ ಸಂದರ್ಭದಲ್ಲಿ ಇಲ್ಲಿನ ನಗರಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ವಾಹನ ಸಮೇತ ಮಾಂಸವನ್ನು ವಶಪಡಿಸಿಕೊಂಡ ಘಟನೆ ಗುರುವಾರ ಪಟ್ಟಣದ ಪುರವರ್ಗ ಸಮೀಪ ಗಣೇಶ ನಗರದಲ್ಲಿ ನಡೆದಿದೆ.
ದಾಳಿಯ ಸಂದರ್ಭದಲ್ಲಿ ಆರೋಪಿಗಳು ಪರಾರಿಯಾಗಿದ್ದಾರೆ. ಶಿರೂರ್‌ನಿಂದ ಭಟ್ಕಳದ ಕಡೆಗೆ ಮಾಂಸವನ್ನು ಸಾಗಣೆ ಮಾಡುತ್ತಿದ್ದರು ಎನ್ನಲಾಗಿದೆ. ಈ ಕುರಿತು ಇಲ್ಲಿನ ನಗರ ಪೊಲೀಸ್‌ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಸಲಾಗಿದೆ.
Next Story





