ಐಗೂರು ಕಾರಿಗೆ ಬೆಂಕಿ ಪ್ರಕರಣ ಓರ್ವ ಬಂಧನ; ಇನ್ನೋರ್ವ ಆರೋಪಿ ಪರಾರಿ
ಸೋಮವಾರಪೇಟೆ, ಡಿ.22: ಐಗೂರು ಮನೆಯೊಂದರ ಮುಂಭಾಗದಲ್ಲಿ ನಿಲ್ಲಿಸಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣವನ್ನು ಭೇದಿಸಿದ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ತಲೆ ಮರೆಸಿಕೊಂಡಿರುವ ಪ್ರಮುಖ ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ. ಬಂಧಿತನು ಕಲ್ಕಂದೂರು ನಿವಾಸಿ ಜಮಾಲುದ್ದೀನ್ ಆಲಿಯಾಸ್ ಜಮಾಲ್ (20) ಎಂದು ತಿಳಿದು ಬಂದಿದೆ.
ಪ್ರಕರಣದ ಇನ್ನೋರ್ವ ಆರೋಪಿ ಪಟ್ಟಣದ ಜನತಾ ಕಾಲನಿ ನಿವಾಸಿ ಕರೀಂ ಬೇಗ್ ತಲೆ ಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ ಜಿಲ್ಲಾ ಅಪರಾಧ ಪತ್ತೆದಳದ ಇನ್‌ಸ್ಪೆಕ್ಟರ್ ಕರೀಂ ರಾವುತರ್ ಹಾಗೂ ಸೋಮವಾರಪೇಟೆ ಡಿವೈಎಸ್ಪಿ ಸಂಪತ್‌ಕುಮಾರ್ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಪರಶಿವಮೂರ್ತಿ, ಸಬ್ ಇನ್‌ಸ್ಪೆಕ್ಟರ್ ಶಿವಣ್ಣ ಹಾಗೂ ಸಿಬ್ಬಂದಿ ಡಿ.21ರಂದು ಮಡಿಕೇರಿಯಲ್ಲಿ ಆರೋಪಿ ಜಮಾಲ್‌ನನ್ನು ಬಂಧಿಸು ವಲ್ಲಿ ಯಶಸ್ವಿಯಾಗಿದ್ದು, ವಿಚಾರಣೆಯ ನಂತರ ಆರೋಪಿಯನ್ನು ನ್ಯಾಯಾ ಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.





