ಕಾರು-ಲಾರಿ ಢಿಕ್ಕಿ: ಕಾರು ಚಾಲಕ ಸಾವು
ಕಾರವಾರ, ಡಿ.22: ಕಾರು ಹಾಗೂ ಲಾರಿ ಮಧ್ಯೆ ಮುಖಾಮುಖಿ ಢಿಕ್ಕಿಯಾಗಿದ್ದು, ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಕಾರವಾರದ ಅಮದಳ್ಳಿಯಲ್ಲಿರುವ ಪಿಯು ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದ ಮೋಹನ ನಾರಾಯಣ ನಾಯ್ಕ(58) ದುರ್ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
Next Story





