ನೋಟು ರದ್ದತಿಗೆ ದೇಶವಾಸಿಗಳಿಂದ ಕೇಂದ್ರಕ್ಕೆ ತಕ್ಕ ಪಾಠ: ಸಚಿವ ರಾಯರೆಡ್ಡಿ ಭವಿಷ್ಯ

ಶಿವಮೊಗ್ಗ, ಡಿ. 23: ಸೂಕ್ತ ಪೂರ್ವಭಾವಿ ಸಿದ್ಧತೆ ಮಾಡಿಕೊಳ್ಳದೆ 500 ಹಾಗೂ 1,000 ರೂ. ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸುವ ಮೂಲಕ ಕೇಂದ್ರ ಸರಕಾರ ದೇಶದಲ್ಲಿ ಆರ್ಥಿಕ ಸಂಕಷ್ಟ ತಂದೊಡ್ಡಿರುವ ಕೇಂದ್ರ ಸರಕಾರಕ್ಕೆ ಹಾಗೂ ಬಿಜೆಪಿಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದೇಶವಾಸಿಗಳು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ. ಶುಕ್ರವಾರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯ ಕರ್ತರೊಂದಿಗೆ ಆಯೋಜಿಸಲಾಗಿದ್ದ ಸಮಾಲೋಚನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೇವಲ ಕಾಂಗ್ರೆಸ್ ಮುಖಂಡರನ್ನು ಟೀಕಿಸುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ.
ಇವರ ಹಗುರವಾದ ಮಾತುಗಳಿಂದ ದೇಶದ ಪ್ರತಿಷ್ಠೆಗೆ ಕುಂದು ಬಂದಿದೆ. ಕೇವಲ ಪ್ರಚಾರದಲ್ಲೇ ತಲ್ಲೀನ ರಾಗಿರುವ ಮೋದಿ ತಂತ್ರಗಾರಿಕೆ ಬಹಳಷ್ಟು ಕಾಲ ಉಳಿಯದು. ಇದೀಗ ನಾಗರಿಕರಿಗೆ ಸತ್ಯ ಏನೆಂಬುವುದರ ಅರಿವಾಗುತ್ತಿದೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರ ದಲ್ಲಿದ್ದಾಗ ಜನತೆಯ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಿದ ಯೋಜನೆಗಳ ಹೆಸರನ್ನು ಬದಲಾಯಿಸಿ ಕೇಂದ್ರ ಸರಕಾರ ಹೊಸ ಹೆಸರಿನ ಬೋರ್ಡ್ ಹಾಕಿಕೊಂಡಿದೆ. ಕಾಂಗ್ರೆಸ್ ಸರಕಾರ ಸಾಧನೆಗಳನ್ನು ತನ್ನದೇ ಸಾಧನೆಗಳೆಂದು ಬಿಂಬಿಸಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದೆ ಎಂದು ಟೀಕಿಸಿದರು. ಮೋದಿಯ ಆಡಳಿತದ ವಿರುದ್ಧ ಬಿಜೆಪಿಯಲ್ಲಿರುವ ಬಹಳಷ್ಟು ನಾಯಕರು ಅಸಮಾಧಾ ಗೊಂಡಿದ್ದಾರೆ.
ಪಕ್ಷದ ಒಳಒಳಗೇ ಕತ್ತಿ ಮಸೆಯುತ್ತಿದ್ದಾರೆ. ನೋಟು ರದ್ಧತಿ ಪ್ರಕರಣದ ಬಳಿಕ ಬಿಜೆಪಿಯಲ್ಲಿಯೇ ಮೋದಿಗೆ ಒಂಟಿತನ ಕಾಡುತ್ತಿದ್ದು ಮುಂದಿನ ದಿನಗಳಲ್ಲಿ ಇದು ಬಹಿರಂಗವಾಗಲಿದೆ ಂದು ಭವಿಷ್ಯ ನುಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ತೀ.ನ. ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು. ನಗರ ಶಾಸಕ, ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್ ಸೇರಿದಂತೆ ಮತ್ತಿತರ ಮುಖಂಡರು ಉಪಸ್ಥಿತರಿದ್ದರು. ಅಕ್ರಮ ಕಲ್ಲು ಗಣಿಗಾರಿಕೆ







