Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾಗರಿಕ ಪೊಲೀಸ್ ಕಾನ್‌ಸ್ಟೇಬಲ್ ನಿರ್ಗಮನ...

ನಾಗರಿಕ ಪೊಲೀಸ್ ಕಾನ್‌ಸ್ಟೇಬಲ್ ನಿರ್ಗಮನ ಪಥಸಂಚಲನ

ವಾರ್ತಾಭಾರತಿವಾರ್ತಾಭಾರತಿ23 Dec 2016 10:50 PM IST
share
ನಾಗರಿಕ ಪೊಲೀಸ್ ಕಾನ್‌ಸ್ಟೇಬಲ್ ನಿರ್ಗಮನ ಪಥಸಂಚಲನ

ಕಾರವಾರ, ಡಿ.23: ಕಳೆದ 9 ತಿಂಗಳಿನಿಂದ ಇಲ್ಲಿನ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯಲ್ಲಿ ಬೇಸಿಕ್ ತರಬೇತಿ ಪಡೆಯುತ್ತಿದ್ದ 125 ನಾಗರಿಕ ಪೊಲೀಸ್ ಕಾನ್‌ಸ್ಟೇಬಲ್‌ಗಳ ನಿರ್ಗಮನ ಪಥಸಂಚಲನ ಶುಕ್ರವಾರ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ಪಶ್ಚಿಮ ವಲಯ ಐಜಿ ಅರುಣ್ ಚಕ್ರವರ್ತಿ ಪ್ರಶಿಕ್ಷಣಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಬಳಿಕ ಮಾತನಾಡಿದ ಅವರು, ಕಾನ್‌ಸ್ಟೇಬಲ್ ಪ್ರಶಿಕ್ಷಣಾರ್ಥಿಗಳಿಗೆ ಕಳೆದ 9 ತಿಂಗಳಲ್ಲಿ ಉತ್ತಮ ಗುಣಮಟ್ಟದ ತರಬೇತಿಯನ್ನು ನೀಡಲಾಗಿದೆ. ಸಮಾಜ ಸೇವೆಯನ್ನು ಮಾಡಲು ದೊರಕಿರುವ ಉತ್ತಮ ಅವಕಾಶವನ್ನು ಸದುಪಯೋಗಪಡಿಸಿಕೊಂಡು ನಿಷ್ಠೆ, ಶ್ರದ್ಧೆ, ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸುವಂತೆ ಕರೆ ನೀಡಿದರು.


ಪೊಲೀಸ್ ವ್ಯವಸ್ಥೆಯಲ್ಲಿ ಕಾನ್‌ಸ್ಟೇಬಲ್‌ಗಳು ಪ್ರಮುಖ ಪಾತ್ರ ವಹಿಸುತ್ತಾರೆ. ದುರ್ಜನರು, ಅಪರಾಧಿಗಳನ್ನು ಕಾನೂನಿನ ಮುಂದೆ ನಿಲ್ಲಿಸುವ ಕಾರ್ಯ ಪೊಲೀಸರದ್ದಾಗಿದೆ. ಎಲ್ಲರನ್ನೂ ಪಾರದರ್ಶಕವಾಗಿ ನೇಮಕಾತಿ ಮಾಡಲಾಗಿದ್ದು, ಉನ್ನತ ಶಿಕ್ಷಣ ಹೊಂದುವ ಆಸಕ್ತಿ ಇರುವವರಿಗೆ ಇಲಾಖೆ ಸಹಕಾರ ನೀಡಲಿದೆ. ಇಲಾಖೆಯಲ್ಲಿ ಸೇವಾ ಮನೋಭಾವದಿಂದ ಜನಪರವಾಗಿ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದರು. ಸೇವೆಗೆ ಸೇರಿದ ಬಳಿಕ ನಿರಂತರವಾಗಿ ತಾಂತ್ರಿಕ ಜ್ಞಾನ ಗಳಿಸಬೇಕು. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಇದಕ್ಕಾಗಿ ಬದಲಾಗುತ್ತಿರುವ ತಂತ್ರಜ್ಞಾನದ ಬಗ್ಗೆ ಅರಿವು ಹೊಂದಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಹುಮಾನ: ತರಬೇತಿ ಅವಧಿಯಲ್ಲಿ ವಿವಿಧ ವಿಭಾಗಗಳಲ್ಲಿ ಸಾಧನೆ ಮಾಡಿದ ಅಭ್ಯರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಒಳಾಂಗಣ ವಿಷಯಗಳ ಪರೀಕ್ಷೆಯಲ್ಲಿ ಸಿದ್ದರಾಮೇಶ ಎಸ್. (ಪ್ರಥಮ), ಶೇಖರಗೌಡ (ದ್ವಿತೀಯ) ಹಾಗೂ ಸಂತೋಷ ಧರನವರ (ತೃತೀಯ). ಹೊರಾಂಗಣ ಪರೀಕ್ಷೆಯಲ್ಲಿ ದಯಾನಂದ (ಪ್ರಥಮ), ಮಧು ಎನ್. (ದ್ವಿತೀಯ) ಹಾಗೂ ಸತೀಶ್ ಬಿರಾದಾರ (ತೃತೀಯ). ಫೈರಿಂಗ್‌ನಲ್ಲಿ ಪರಶುರಾಮ ಅತನೂರ್ (ಪ್ರಥಮ), ಪ್ರಕಾಶ ಭಜಂತ್ರಿ (ದ್ವಿತೀಯ) ಸುರೇಶ ಕಣ್ಣೂರು (ತೃತೀಯ) ಹಾಗೂ ಸರ್ವೋತ್ತಮ ಪ್ರಶಸ್ತಿಯನ್ನು ಸಂತೋಷ ಧರನವರ ಅವರಿಗೆ ನೀಡಿ ಗೌರವಿಸಲಾಯಿತು.


ಆಕರ್ಷಕ ಪಥಸಂಚಲನ: ನಿರ್ಗಮನ ಪಥಸಂಚಲನ ಅಂಗವಾಗಿ ಪ್ರಶಿಕ್ಷಣಾರ್ಥಿಗಳು ನಡೆಸಿದ ಆಕರ್ಷಕ ಪಥಸಂಚಲನ ಎಲ್ಲರ ಮೆಚ್ಚುಗೆಗೆಪಾತ್ರವಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X