ಹಿರಿಯ ನಟ ಚೇತನ್ ರಾಮರಾವ್ ನಿಧನ

ಮೈಸೂರು, ಡಿ.24: ಕನ್ನಡದ ಖ್ಯಾತ ಹಿರಿಯ ನಟ ಚೇತನ್ ರಾಮರಾವ್(76) ಅನಾರೋಗ್ಯದಿಂದ ನಿನ್ನೆ ರಾತ್ರಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೈಸೂರಿನ ತೊಣಚಿಕೊಪ್ಪಲು ನಿವಾಸಿಯಾಗಿರುವ ಚೇತನ್ ರಾಮರಾವ್ ಅವರು ಮೂತ್ರಪಿಂಡ ಹಾಗೂ ಮಂಡಿನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ನಿನ್ನೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಚೇತನ್ ಅವರು ಪತ್ನಿ, ಮೂವರು ಪುತ್ರಿಯರು, ಅಳಿಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಇವರು ಸುಮಾರು 350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದು, ಡಾ.ರಾಜಕುಮಾರ್, ಡಾ.ವಿಷ್ಣುವರ್ಧನ್ ಅಂಬರೀಶ್ ಸೇರಿದಂತೆ ಹೆಸರಾಂತ ನಟರೊಂದಿಗೆ ಅಭಿನಯಿಸಿದ್ದಾರೆ. ಅಲ್ಲದೆ ಪೋಷಕ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದ ಇವರಿಗೆ ರಾಜ್ಯೋತ್ಸವ ಪ್ರಶಸ್ತಿಯೂ ಲಭಿಸಿದೆ.
Next Story





