Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತೀರ್ಥಹಳ್ಳಿ: ಎಳ್ಳಮಾವಾಸ್ಯೆ ಜಾತ್ರೆಯ...

ತೀರ್ಥಹಳ್ಳಿ: ಎಳ್ಳಮಾವಾಸ್ಯೆ ಜಾತ್ರೆಯ ಸಿದ್ಧತಾ ಸಭೆ

ಸಿಸಿ ಕ್ಯಾಮರ ಅಳವಡಿಕೆ: ಎಸ್ಸೈ ಭರತ್‌ಕುಮಾರ

ವಾರ್ತಾಭಾರತಿವಾರ್ತಾಭಾರತಿ24 Dec 2016 10:45 PM IST
share
ತೀರ್ಥಹಳ್ಳಿ: ಎಳ್ಳಮಾವಾಸ್ಯೆ ಜಾತ್ರೆಯ ಸಿದ್ಧತಾ ಸಭೆ

ತೀರ್ಥಹಳ್ಳಿ, ಡಿ.24: ತೀರ್ಥ ಹಳ್ಳಿಯ ಪ್ರತಿಷ್ಠಿತ ಶ್ರೀ ರಾಮೇಶ್ವರ ದೇವಾಲಯದ ಎಳ್ಳಮಾವಾಸ್ಯೆ ಜಾತ್ರೆಯು ಡಿ.29ರಿಂದ ಆರಂಭ ಗೊಳ್ಳಲಿದ್ದು, ಈ ಸಂಬಂಧ ಪಟ್ಟಣ ಪಂಚಾಯತ್ ವತಿಯಿಂದ ಜಾತ್ರೆಯ ಸಿದ್ಧತಾ ಸಭೆಯನ್ನು ಆಯೋಜಿಸಲಾಗಿತ್ತು.


ಈ ಸಂದರ್ಭದಲ್ಲಿ ಮಾತನಾಡಿದ ಸಬ್ ಇನ್ ಸ್ಪೆಕ್ಟರ್ ಭರತ್‌ಕುಮಾರ್, ಈ ಬಾರಿ ಜಾತ್ರೆ ನಡೆಯುವ ರಥಬೀದಿ ಮತ್ತು ಪಟ್ಟಣದ ವಿವಿಧ ಭಾಗಗಳಲ್ಲಿ ನೂರಕ್ಕೂ ಹೆಚ್ಚು ಸಿ.ಸಿ. ಕ್ಯಾಮರಾ ಅಳವಡಿಸಿ ಪ್ರತಿ ಚಲನವಲನದ ಮೇಲೆ ಕಣ್ಗಾವಲು ಇಡಲು ತೀರ್ಮಾನಿಸಲಾಗಿದೆ. ಕಳ್ಳತನ, ದುರ್ವರ್ತನೆ, ಅಹಿತರಕ ಘಟನೆಗೆ ಆಸ್ಪದವಾಗದ ರೀತಿಯಲ್ಲಿ ಸಿ.ಸಿ. ಕ್ಯಾಮರಾವನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.


ಈ ಬಾರಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಹಾಗೂ ಮಹಿಳಾ ಪೊಲೀಸರನ್ನು ನಿಯೋಜಿಸಲಾಗಿದ್ದು, ಜಾತ್ರೆಗೆ ಬರುವ ಪುಟಾಣಿ ಮಕ್ಕಳ ಸುರಕ್ಷತೆಗೆ ಸ್ವಯಂ ಸೇವಾ ಸಂಘಗಳ ನೆರವಿನೊಂದಿಗೆ ಜಾತ್ರೆಗೆ ಬರುವ ಮಕ್ಕಳಿಗೆ ಪ್ರವೇಶ ದ್ವಾರದಲ್ಲಿ ಸುರಕ್ಷತಾ ಬ್ಯಾಂಡ್ ಕಟ್ಟುವ ಹೊಸ ಯೋಜನೆಯನ್ನು ಮಾಡಲಾಗಿದೆ ಎಂದು ಸರ್ಕಲ್ ಇನ್‌ಸ್ಪೆಕ್ಟರ್ ಸುರೇಶ್ ತಿಳಿಸಿದರು.


 ಪಟ್ಟಣ ಪಂಚಾಯತ್ ಅಧ್ಯಕ್ಷ ಸಂದೇಶ್ ಜವಳಿ ಮಾತನಾಡಿ, ಜಾತ್ರೆ ಪ್ರದೇಶದಲ್ಲಿ ಈ ಬಾರಿ 7 ಮೊಬೈಲ್ ಟಾಯ್ಲೆಟ್‌ಗಳನ್ನು ಅಳವಡಿಸಲಾಗುವುದು. ಜಾತ್ರೆಯ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಬಯಲಲ್ಲಿ ಶೌಚ ಮಾಡಿ ಪರಿಸರವನ್ನು ಹಾನಿಗೊಳಿಸಬಾರದು. ಪುರ ಪಂಚಾಯತ್ ಈ ಬಾರಿ ಜಾತ್ರೆ ಪ್ರದೇಶದಲ್ಲಿ ಗಲೀಜು ಮಾಡಿದವರಿಗೆ ದಂಡ ವಿಧಿಸುವ ಎಚ್ಚರಿಕೆ ನೀಡಿದರು. ಈ ಸಭೆಯಲ್ಲಿ ಪಪಂ ಉಪಾಧ್ಯಕ್ಷೆ ಲಕ್ಷ್ಮೀದೇವಿ, ಅಧಿಕಾರಿ ನಟರಾಜ್, ಪಪಂ ಸದಸ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X