Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಸಂಸದೆಯ ಸಹಕಾರಿ ಬ್ಯಾಂಕ್‌ನಲ್ಲಿ...

ಬಿಜೆಪಿ ಸಂಸದೆಯ ಸಹಕಾರಿ ಬ್ಯಾಂಕ್‌ನಲ್ಲಿ ಕಪ್ಪುಹಣ ದಂಧೆ: ಸಿಬಿಐನಿಂದ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ25 Dec 2016 7:46 PM IST
share
ಬಿಜೆಪಿ ಸಂಸದೆಯ ಸಹಕಾರಿ ಬ್ಯಾಂಕ್‌ನಲ್ಲಿ ಕಪ್ಪುಹಣ ದಂಧೆ: ಸಿಬಿಐನಿಂದ ಪ್ರಕರಣ ದಾಖಲು

ಮುಂಬೈ,ಡಿ.25: ಮುಂಬೈನಲ್ಲಿ ಕಳೆದ ವಾರ 10 ಕೋ.ರೂ.ಗಳ ಹಳೆಯ ನೋಟು ಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ಪ್ರೀತಂ ಮುಂಢೆ ಮತ್ತು ಇತರ ಕೆಲವರ ನಿಯಂತ್ರಣದಲ್ಲಿರುವ ವೈದ್ಯನಾಥ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ಇಬ್ಬರು ಅಧಿಕಾರಿಗಳ ವಿರುದ್ಧ ಸಿಬಿಐ ಪ್ರಕರಣವನ್ನು ದಾಖಲಿಸಿಕೊಂಡಿದೆ.

ಬೀಡ್,ಔರಂಗಾಬಾದ್,ಪುಣೆ ಮತ್ತು ಮುಂಬೈಗಳ 11 ಸ್ಥಳಗಳಲಿ ಶೋಧ ಕಾರ್ಯಾ ಚರಣೆಗಳನ್ನೂ ಸಿಬಿಐ ನಡೆಸಿದೆ. ಅದು ಈವರೆಗೆ ಯಾರನ್ನೂ ಬಂಧಿಸಿಲ್ಲ.

ಡಿ.15ರಂದು ಪೊಲೀಸರು ಕಾರೊಂದರಿಂದ 10.10 ಕೋ.ರೂ.ಗಳನ್ನು ವಶಪಡಿಸಿ ಕೊಂಡಿದ್ದು, ಈ ಪೈಕಿ 10 ಲ.ರೂ.ಗಳು ಹೊಸ 2,000 ರೂ.ನೋಟುಗಳಲ್ಲಿದ್ದವು. ಈ ಹಣ ವೈದ್ಯನಾಥ ಬ್ಯಾಂಕಿನ ಅಧಿಕಾರಿಗಳು ಸಾಗಿಸುತ್ತಿದ್ದ 25 ಕೋ.ರೂ.ಗಳ ಹಳೆಯ ನೋಟುಗಳ ಭಾಗವಾಗಿತ್ತು ಎನ್ನುವುದು ವಿಚಾರಣೆಯ ಬಳಿಕ ಖಚಿತಪಟ್ಟಿತ್ತು.

ವೈದ್ಯನಾಥ ಬ್ಯಾಂಕು ಬೀಡ್‌ನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿದ್ದು, ಬಿಜೆಪಿಯ ಹಿರಿಯ ನಾಯಕರಾಗಿದ್ದ ದಿ.ಗೋಪಿನಾಥ ಮುಂಢೆಯವರ ಪುತ್ರಿಯಾಗಿರುವ ಪ್ರೀತಂ ಈ ಬ್ಯಾಂಕಿನ ನಿರ್ದೇಶಕಿಯಾಗಿದ್ದಾರೆ. ಹಣದ ಸಾಗಾಣಿಕೆಗೆ ಸಂಬಂಧಿಸಿದಂತೆ ಓರ್ವ ವೈದ್ಯ ಮತ್ತು ಇತರ ಕೆಲವರ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಆರೋಪಿಗಳು ಒಳಸಂಚು ರೂಪಿಸಿದ್ದರು ಮತ್ತು ಹೊಸನೋಟುಗಳೊಂದಿಗೆ ವಿನಿಮಯಕ್ಕಾಗಿ ಬ್ಯಾಂಕಿನ ಬೀಡ್ ಕಚೇರಿಯಿಂದ ಸುಮಾರು 25 ಕೋ.ರೂ.ಗಳ ಹಳೆಯ ನೋಟುಗಳನ್ನು ಮುಂಬೈ ಘಾಟ್‌ಕೋಪರ್‌ನಲ್ಲಿರುವ ಬ್ಯಾಂಕಿನ ಶಾಖೆಗೆ ಅಕ್ರಮವಾಗಿ ಸಾಗಿಸುತ್ತಿದ್ದರು ಎಂದು ಸಿಬಿಐ ತಿಳಿಸಿದೆ.

ಈ ಪೈಕಿ 15 ಕೋ.ರೂ.ಗಳನ್ನು ಮಹಾರಾಷ್ಟ್ರ ರಾಜ್ಯ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನಲ್ಲಿ ಅಕ್ರಮವಾಗಿ ಜಮಾ ಮಾಡಲಾಗಿತ್ತು. 10 ಲಕ್ಷ ರೂ.ಗಳ ಹೊಸ 2,000 ರೂ.ನೋಟುಗಳು ಮತ್ತು 10 ಕೋ.ರೂ.ಗಳ ಹಳೆಯ 500 ರೂ.ನೋಟುಗಳು ಸೇರಿದಂತೆ 10.10 ಕೋ.ರೂ.ಗಳೊಂದಿಗೆ ಬೀಡ್‌ಗೆ ವಾಪಸಾಗುತ್ತಿದ್ದಾಗ ಪೊಲೀಸರು ಕಾರನ್ನು ತಡೆದು ನಿಲ್ಲಿಸಿ ವಶಪಡಿಸಿಕೊಂಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಖಾ ಮ್ಯಾನೇಜರ್ ಸೇರಿದಂತೆ ಬ್ಯಾಂಕಿನ ಮೂವರು ಸಿಬ್ಬಂದಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಹಣ ವೈದ್ಯನಾಥ ಬ್ಯಾಂಕಿಗೆ ಸೇರಿದ್ದು ಎನ್ನುವುದು ವಿಚಾರಣೆಯಿಂದ ಬೆಳಕಿಗೆ ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X