ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸರ ದಾಳಿ : ಮೂವರ ಬಂಧನ
ಮಂಗಳೂರು, ಡಿ.25 : ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ , ಐವರು ಮಹಿಳೆಯರನ್ನು ರಕ್ಷಿಸಿದ ಘಟನೆ ನಡೆದಿದೆ.
ಮಂಗಳೂರಿನ ನಾಗೂರಿಯಲ್ಲಿರುವ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು, ಮೂರು ಆರೋಪಿಗಳನ್ನು ಬಂಧಿಸಿದ್ದು ಐವರು ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ.
ಆರೋಪಿಗಳನ್ನು ಬಂಟ್ವಾಳದ ಮನೋಜ್ , ಹರೀಶ್ ಶೆಟ್ಟಿ, ದುರ್ಗೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ .
ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
Next Story





