Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಶ್ವ ಜಿಎಸ್‌ಬಿ ಸಮ್ಮೇಳನಕ್ಕೆ...

ವಿಶ್ವ ಜಿಎಸ್‌ಬಿ ಸಮ್ಮೇಳನಕ್ಕೆ ವಿದ್ಯುಕ್ತ ತೆರೆ

ವಾರ್ತಾಭಾರತಿವಾರ್ತಾಭಾರತಿ25 Dec 2016 9:54 PM IST
share
ವಿಶ್ವ ಜಿಎಸ್‌ಬಿ ಸಮ್ಮೇಳನಕ್ಕೆ ವಿದ್ಯುಕ್ತ ತೆರೆ

ಹೆಜಮಾಡಿ, ಡಿ.25: ಕರಾವಳಿಯ ಮೂರು ಜಿಲ್ಲೆಗಳಲ್ಲದೇ ಹೊರ ಜಿಲ್ಲೆಗಳಿಂದ ಹಾಗೂ ಗೋವಾ, ಕೇರಳ, ಮಹಾರಾಷ್ಟ್ರ ಹಾಗೂ ವಿದೇಶ ಗಳಿಂದಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಆಗಮಿಸಿದ ಜಿಎಸ್‌ಬಿ ಸಮಾಜ ಬಾಂಧವರು ಉತ್ಸಾಹದಿಂದ ಪಾಲ್ಗೊಂಡ ವಿಶ್ವ ಜಿಎಸ್‌ಬಿ ಸಮ್ಮೇಳನ ಇಂದು ಸಂಜೆ ಹೆಜಮಾಡಿಯ ಬಸ್ತಿಪಡ್ಪು ಮೈದಾನದಲ್ಲಿ ವಿದ್ಯುಕ್ತವಾಗಿ ಮುಕ್ತಾಯ ಗೊಂಡಿತು.

 ಸದೃಢ ರಾಷ್ಟ್ರ ನಿರ್ಮಾಣಕ್ಕಾಗಿ ಆದರ್ಶ ಸಮಾಜದ ರೂವಾರಿಗಳನ್ನು ಸೃಷ್ಟಿಸಲು, ಮೌಲ್ಯಯುತ ಶಿಕ್ಷಣಕ್ಕೆ ಪ್ರಾಶಸ್ತ್ಯ ನೀಡಲು, ಉದ್ಯಮ ನಿರ್ಮಾಣಕ್ಕೆ ಸಹಕಾರ, ಸಾಮಾಜಿಕ ಕ್ರಾಂತಿಯ ವಿಸ್ತರಣೆ ಮಾಡುವ ತೀರ್ಮಾನಗಳೊಂದಿಗೆ ಸಮ್ಮೇಳನಕ್ಕೆ ತೆರೆಬಿತ್ತು.

 ಐತಿಹಾಸಿಕ ಸಮ್ಮೇಳನದ ಸವಿನೆನಪಿಗಾಗಿ ಮಣಿಪಾಲದಲ್ಲಿ ಜಿಎಸ್‌ಬಿ ಸಭಾಂಗಣವನ್ನು ನಿರ್ಮಿಸಲು ನಿರ್ಧಾರವನ್ನು ತೆಗೆದುಕೊಳ್ಳಲಾಯಿತು.

ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸುಪ್ರೀಂ ಕೋರ್ಟಿನ ಹಿರಿಯ ನ್ಯಾಯವಾದಿಗಳಾದ ಎಂ.ವಿ.ಕಿಣಿ ಅವರು ಮಾತನಾಡಿ, ಸಂವಿಧಾನದ 29 ಮತ್ತು 30ನೇ ಪರಿಚ್ಛೇಧದಲ್ಲಿ ಅಲ್ಪಸಂಖ್ಯಾತ ಸಮಾಜಕ್ಕೆ ಸಿಗುವ ಸವಲತ್ತುಗಳ ಬಗ್ಗೆ ವಿವರಿಸಿದರು. ಸಾರಸ್ವತ ಸಮಾಜ ಮೀಸಲಾತಿಯ ಸೌಲಭ್ಯವಿಲ್ಲದೇ ಬಲಿಷ್ಠವಾಗಿ ಬೆಳೆದಿದೆ ಎಂದರು. ಮುಂದಿನ ದಿನಗಳಲ್ಲಿ ಮೀಸಲಾತಿಯ ಅಗತ್ಯವಿದ್ದಲ್ಲಿ ಅದನ್ನು ಹೇಗೆ ನ್ಯಾಯಯುತವಾಗಿ ಪಡೆಯಬಹುದು ಎಂಬುದನ್ನು ವಿವರಿಸಿದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಮಂಗಳೂರಿನ ಉದ್ಯಮಿ ಜಗನ್ನಾಥ ಶೆಣೈ ಅವರು ಮಾತನಾಡಿ, ಮನೆಯಲ್ಲಿ ಆರಂಭಗೊಂಡ ಸಂಸ್ಕಾರ, ಸಂಸ್ಕೃತಿಯಾಗಿ ರೂಪುಗೊಂಡು ಬಲಿಷ್ಠ ಸಮಾಜ ನಿರ್ಮಾಣಕ್ಕೆ ಪೂರಕವಾಗುತ್ತದೆ ಎಂದರು.

ಸಮಾರಂಭದಲ್ಲಿ ನಿವೃತ್ತ ವೈಸ್ ಅಡ್ಮಿರಲ್ ಆರ್.ರಾವ್, ಸಿಎ ಎಸ್. ಎಸ್. ನಾಯಕ್, ಗೋವಾ ಜಿಎಸ್‌ಬಿ ಸಮಾಜ ಮುಖ್ಯಸ್ಥ ಗಿರಿರಾಜ ಭಂಡಾರ್ಕರ್, ವಿನಾಯಕ್ ಶ್ಯಾನುಬೋಗ್, ಮನೋಹರ ನಾಯಕ್, ಉತ್ತರ ಕನ್ನಡ ಯುವವಾಹಿನಿ ಮುಖ್ಯಸ್ಥ ರಾಘವಬಾಲೆರಿ, ನಾಂದ್ಯಾಲ ರಘುವೀರ ಶೆಣೈ, ರಘುನಂದನ್ ಕಾಮತ್, ಧ್ಯಾನಚಂದ್ ಪ್ರಶಸ್ತಿ ವಿಜೇತ ಉದಯಪ್ರಭು, ಪಾಂಗಾಳ ವಿಲಾಸ ನಾಯಕ್ ಮುಂತಾದವರು ಉಸ್ಥಿತರಿದ್ದರು.

 ಸಮ್ಮೇಳನ ಸ್ವಾಗತ ಸಮಿತಿ ಉಪಾಧ್ಯಕ್ಷ ಬಿ.ಆರ್.ರಾವ್ ಸ್ವಾಗತಿಸಿದರು, ಸಾಣೂರು ನರಸಿಂಹ ಕಾಮತ್ ಕಾರ್ಯಕ್ರಮ ನಿರೂಪಿಸಿದರು. ಹಿತರಕ್ಷಣಾ ವೇದಿಕೆ ಅಧ್ಯಕ್ಷ ಸತೀಶ್ ಹೆಗ್ಡೆ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X