Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಶ್ವಸಂಸ್ಥೆಯ ಜೊತೆ ನಂಟು ಕಡಿಯಲು...

ವಿಶ್ವಸಂಸ್ಥೆಯ ಜೊತೆ ನಂಟು ಕಡಿಯಲು ಇಸ್ರೇಲ್ ಸಿದ್ಧತೆ?

ವಾರ್ತಾಭಾರತಿವಾರ್ತಾಭಾರತಿ25 Dec 2016 10:09 PM IST
share
ವಿಶ್ವಸಂಸ್ಥೆಯ ಜೊತೆ ನಂಟು ಕಡಿಯಲು ಇಸ್ರೇಲ್ ಸಿದ್ಧತೆ?

ನ್ಯೂಯಾರ್ಕ್,ಡಿ.25: ಫೆಲೆಸ್ತೀನ್ ನೆಲದಲ್ಲಿ ಇಸ್ರೇಲಿ ವಸಾಹತುಗಳ ನಿರ್ಮಾಣವನ್ನು ನಿಲ್ಲಿಸುವಂತೆ ಒತ್ತಾಯಿಸುವ ನಿರ್ಣಯವನ್ನು ಭದ್ರತಾಮಂಡಳಿ ಅಂಗೀಕರಿಸಿರುವ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯ ಜೊತೆಗಿನ ಬಾಂಧವ್ಯವನ್ನು ಇಸ್ರೇಲ್ ಮರುಪರಿಶೀಲಿಸಲಿದೆಯೆಂದು ಪ್ರಧಾನಿ ಬೆಂಜಮಿನ್ ನೆತಾನ್ಯಾಹು ಶನಿವಾರ ತಿಳಿಸಿದ್ದಾರೆ.

ಪಶ್ಚಿಮದಂಡೆ ಹಾಗೂ ಪೂರ್ವ ಜೆರುಸಲೇಮ್‌ನಲ್ಲಿ ಇಸ್ರೇಲಿ ವಸಾಹತುಗಳ ನಿರ್ಮಾಣವನ್ನು ನಿಲ್ಲಿಸುವಂತೆ ಆಗ್ರಹಿಸುವ ನಿರ್ಣಯವನ್ನು ಶನಿವಾರ 15 ಸದಸ್ಯ ಬಲದ ಭದ್ರತಾ ಮಂಡಳಿಯಲ್ಲಿ ಮಂಡಿಸಿತ್ತು. ಈ ಸಂದರ್ಭದಲ್ಲಿ, ನಿರ್ಣಯದ ವಿರುದ್ಧ ವಿಟೋ ಅಧಿಕಾರವನ್ನು ಚಲಾಯಿಸದಿರುವ ಮೂಲಕ ಅಮೆರಿಕವು ಇಸ್ರೇಲ್‌ಗೆ ರಾಜತಾಂತ್ರಿಕ ರಕ್ಷಣೆ ನೀಡುವ ತನ್ನ ದೀರ್ಘಕಾಲದ ನಿಲುವಿನಿಂದ ದೂರಸರಿದಿತ್ತು. ಅಮೆರಿಕದ ಈ ನಿರ್ಧಾರವು ನಾಚಿಕೆಗೇಡಿನದು ಎಂದು ನೆತನ್ಯಾಹು ನಿನ್ನೆ ಕಿಡಿಕಾರಿದ್ದರು.

‘‘ವಿಶ್ವಸಂಸ್ಥೆಯ ಸಂಘಟನೆಗಳಿಗೆ ಇಸ್ರೇಲ್ ನೀಡುತ್ತಿರುವ ಆರ್ಥಿಕ ನೆರವು ಹಾಗೂ ಇಸ್ರೇಲಿನಲ್ಲಿ ವಿಶ್ವಸಂಸ್ಥೆ ಪ್ರತಿನಿಧಿಗಳ ಉಪಸ್ಥಿತಿ ಸೇರಿದಂತೆ ವಿಶ್ವಸಂಸ್ಥೆಯ ಜೊತೆಗೆ ಹೊಂದಿರುವ ನಮ್ಮ ಎಲ್ಲಾ ನಂಟುಗಳ ಮರುವೌಲ್ಯಮಾಪನವನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸುವಂತೆ ನಾನು ಅಧಿಕಾರಿಗಳಿಗೆ ಈಗಾಗಲೇ ಸೂಚಿಸಿದ್ದೇನೆ’’ ಎಂದು ನೆತಾನ್ಯಾಹು ಇಂದು ರಾಷ್ಟ್ರವನ್ನುದ್ದೇಶಿಸಿ ಮಾಡಿದ ರೇಡಿಯೋ ಭಾಷಣದಲ್ಲಿ ತಿಳಿಸಿದ್ದಾರೆ.

ತನ್ನ ದೀರ್ಘ ಸಮಯದ ಮಿತ್ರ ರಾಷ್ಟ್ರವಾದ ಇಸ್ರೇಲ್ ಹಾಗೂ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಂದ ಎದುರಾದ ಭಾರೀ ಒತ್ತಡವನ್ನು ಲೆಕ್ಕಿಸದೆ ಅಮೆರಿಕವು ಭದ್ರತಾ ಮಂಡಳಿಯ ಸಭೆಗೆ ಗೈರುಹಾಜರಾಗಿತ್ತು. 14 ಮತಗಳೊಂದಿಗೆ ನಿರ್ಣಯವು ಅಂಗೀಕರಿಸಲ್ಪಟ್ಟಿತ್ತು. 1967ರಲ್ಲಿ ಅರಬ್ ರಾಷ್ಟ್ರಗಳೊಂದಿಗಿನ ಸಮರದ ಬಳಿಕ ಇಸ್ರೇಲ್ ವಶಪಡಿಸಿಕೊಂಡ ಪಶ್ಚಿಮದಂಡೆ ಗಾಝಾ ಹಾಗೂ ಪೂರ್ವ ಜೆರುಸಲೇಂಗಳಲ್ಲಿ ಯಹೂದಿ ವಸಾಹತುಗಳನ್ನು ನಿರ್ಮಿಸುವ ನೀತಿಯನ್ನು ಇಸ್ರೇಲ್ ಹಲವು ದಶಕಗಳಿಂದ ಮುಂದುವರಿಸುತ್ತಾ ಬಂದಿದೆ.
ಪಶ್ಚಿಮದಂಡೆ ಹಾಗೂ ಪೂರ್ವ ಜೆರುಸಲೇಂನಲ್ಲಿ ಇಸ್ರೇಲಿ ವಸಾಹತು ನಿರ್ಮಾಣ ಚಟುವಟಿಕೆಯು ಅಕ್ರಮವಾಗಿದ್ದು, ಶಾಂತಿಸ್ಥಾಪನೆಗೆ ಅಡ್ಡಿಯಾಗಿದೆಯೆಂದು ಅದು ಹೇಳಿಕೊಂಡಿವೆ.

‘‘ವಿಶ್ವಸಂಸ್ಥೆಯ ಸಂಘಟನೆಗಳಿಗೆ ಇಸ್ರೇಲ್ ನೀಡುತ್ತಿರುವ ಆರ್ಥಿಕ ನೆರವು ಹಾಗೂ ಇಸ್ರೇಲಿನಲ್ಲಿ ವಿಶ್ವಸಂಸ್ಥೆ ಪ್ರತಿನಿಧಿಗಳ ಉಪಸ್ಥಿತಿ ಸೇರಿದಂತೆ ವಿಶ್ವಸಂಸ್ಥೆಯ ಜೊತೆಗೆ ಹೊಂದಿರುವ ನಮ್ಮ ಎಲ್ಲಾ ನಂಟುಗಳ ಮರುವೌಲ್ಯಮಾಪನವನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸುವಂತೆ ನಾನು ಅಧಿಕಾರಿಗಳಿಗೆ ಈಗಾಗಲೇ ಸೂಚಿಸಿದ್ದೇನೆ’’

ಭದ್ರತಾ ಮಂಡಳಿ ನಿರ್ಣಯಕ್ಕೆ ಅರಬ್‌ಲೀಗ್ ಸ್ವಾಗತ

ಕೈರೋ,ಡಿ.25: ಇಸ್ರೇಲ್ ಫೆಲೆಸ್ತೀನ್ ನೆಲದಲ್ಲಿ ವಸಾಹತುಗ ನಿರ್ಮಾಣವನ್ನು ತಕ್ಷಣವೇ ನಿಲ್ಲಿಸಬೇಕೆಂದು ಆಗ್ರಹಿಸುವ ನಿರ್ಣಯವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಅಂಗೀಕರಿಸಿರುವುದನ್ನು ಅರಬ್‌ಲೀಗ್ ಸ್ವಾಗತಿಸಿದೆ.

 ‘‘ತಮ್ಮ ನ್ಯಾಯಬದ್ಧ ಹಕ್ಕುಗಳನ್ನು ಪಡೆಯಲು ಪೂರ್ವಜೆರುಸಲೇಂನ್ನು ರಾಜಧಾನಿಯನ್ನಾಗಿ ಮಾಡಿಕೊಂಡ ಸ್ವತಂತ್ರ ಫೆಲೆಸ್ತೀನ್ ರಾಜ್ಯದ ಸ್ಥಾಪನೆಗೆ ಫೆಲೆಸ್ತೀನ್ ಜನತೆ ನಡೆಸಿದ ಹೋರಾಟವನ್ನು ಈ ನಿರ್ಣಯವು ಪ್ರತಿಬಿಂಬಿಸುತ್ತಿದೆ’’ ಎಂದು ಅರಬ್‌ಲೀಗ್ ವರಿಷ್ಠ ಅಹ್ಮದ್ ಅಬೌಲ್‌ಘಾತಿ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

ಮಂಡಳಿಯ 15 ಸದಸ್ಯ ರಾಷ್ಟ್ರಗಳ ಪೈಕಿ 14 , ಈ ನಿರ್ಣವನ್ನು ಅನುಮೋದಿಸಿದ್ದವು. ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ತೀವ್ರ ಪ್ರಯತ್ನದ ಹೊರತಾಗಿಯೂ ಅಮೆರಿಕವು ನಿರ್ಣಯದ ವಿರುದ್ಧ ವಿಟೋ ಪ್ರಯೋಗಿಸಲು ನಿರಾಕರಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X