ಹಿಂದೂ ಜನಜಾಗೃತಿ ಸಮಿತಿಯಿಂದ ಧರಣಿ

ಉಡುಪಿ, ಡಿ.25: ಕೇಂದ್ರ ಸರಕಾರವು ಬಾಂಗ್ಲಾದೇಶದಲ್ಲಿರುವ ಅಲ್ಪ ಸಂಖ್ಯಾತ ಹಿಂದೂಗಳ ಸುರಕ್ಷತೆ ವಿಷಯವನ್ನು ವಿಶ್ವಸಂಸ್ಥೆಯಲ್ಲಿ ಮಂಡಿಸುವಂತೆ ಹಾಗೂ ಶಿವಮೊಗ್ಗ ಸಕ್ರೆಬೈಲು ಸಾಮೂಹಿಕ ಅತ್ಯಾಚಾರ ಪ್ರಕರಣ ದಲ್ಲಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರಗಿಸುವಂತೆ ಆಗ್ರಹಿಸಿ ಉಡುಪಿಯ ಹಿಂದೂ ಜನಜಾಗೃತಿ ಸಮಿತಿಯು ರವಿವಾರ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಧರಣಿ ನಡೆಸಿತು.
ಈ ಸಂದರ್ಭದಲ್ಲಿ ಹಿಂದೂ ವಿಧಿಜ್ಞ ಪರಿಷತ್ತಿನ ದಿನೇಶ್ ಸಿ. ನಾಯ್ಕಿ, ಹಿಂದೂ ಜನಜಾಗೃತಿ ಸಮಿತಿಯ ವಿಜಯ ಕುಮಾರ್, ರಾಜೇಂದ್ರ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
Next Story





