ಅಪಘಾತ: ಬೈಕ್ ಸವಾರನಿಗೆ ಗಾಯ
ವುೂಡಿಗೆರೆ, ಡಿ.26: ಮರಳು ಖಾಲಿ ಮಾಡಿ ಅತಿವೇಗವಾಗಿ ಬರುತ್ತಿದ್ದ ಟಿಪ್ಪರ್‌ವೊಂದು ಬೈಕ್‌ಗೆ ಢಿಕ್ಕಿ ಹೊಡೆದು ಬೈಕ್ ಸವಾರನ ಕಾಲು ಮುರಿತಕ್ಕೊಳಗಾಗಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಣಕಲ್ ಹೋಬಳಿ ಹೊರಟ್ಟಿ ಮಸೀದಿಯ ಧರ್ಮಗುರುಗಳಾದ ಹಝರತ್ ಸೈಯದ್ ನೂರ್ ಮುಹಮ್ಮದ್ ಅವರು ಶನಿವಾರ ಹೊರಟ್ಟಿಯಿಂದ ಸಬ್ಬೇನಹಳ್ಳಿಗೆ ತೆರಳುತ್ತಿದ್ದರು.
ಈ ವೇಳೆ ಸಬ್ಬೇನಹಳ್ಳಿ ಬಳಿ ಎದುರಿನಿಂದ ಬಂದ ಟಿಪ್ಪರ್ ಢಿಕ್ಕಿ ಹೊಡೆದು ರಸ್ತೆಗೆ ಬಿದ್ದ ಪರಿಣಾಮ ಅವರ ಕಾಲು ಮುರಿತಕ್ಕೊಳಗಾಗಿದೆ. ಟಿಪ್ಪರ್ ಚಾಲಕ ಟಿಪ್ಪರ್ ಬಿಟ್ಟು ಪರಾರಿಯಾಗಿದ್ದಾನೆ. ಈ ಬಗ್ಗೆ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





