ಮರದ ಕೊಂಬೆ ಬಿದ್ದು ಕಾರ್ಮಿಕ ಸಾವು
ಮಡಿಕೇರಿ, ಡಿ.26: ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಒಣಗಿದ ಮರದ ಕೊಂಬೆ ಬಿದ್ದು ಕಾರ್ಮಿಕನೊಬ್ಬ ಸಾವಿಗೀಡಾಗಿರುವ ಘಟನೆ ಇಲ್ಲಿಗೆ ಸಮೀಪದ ಬಿಳಿಗೇರಿ ಗ್ರಾಮದಲ್ಲಿ ನಡೆದಿದೆ.
ಕೆ.ಕೆ.ಸುರೇಶ್(42) ಎಂಬವರೇ ಸಾವಿಗೀಡಾದವರಾಗಿದ್ದಾರೆ.
ಮೂಲತಃ ಕೇರಳದ ಇಡುಕ್ಕಿ ಜಿಲ್ಲೆಯ ಕಂಞಂಕಡಿ ತೋಡಪುಳ ನಿವಾಸಿಯಾಗಿದ್ದಾರೆ.
ಅಪರಾಹ್ನ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಒಣಗಿದ ಮರದ ರೆಂಬೆಯೊಂದು ಸುರೇಶ್ ಅವರ ಮೇಲೆ ಬಿದ್ದಿತೆನ್ನಲಾಗಿದೆ.
ಈ ಸಂದರ್ಭ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಜಿಲ್ಲಾಸ್ಪತ್ರೆಗೆ ಕರೆ ತರಲಾಯಿತಾದರೂ, ಆ ವೇಳೆಗಾಗಲೇ ಅವರು ಸಾವಿಗೀಡಾಗಿರುವುದನ್ನು ವೈದ್ಯರು ದೃಢಪಡಿಸಿದರು.
ಸೋಮವಾರ ಸಂಜೆ ಕುಟುಂಬಸ್ಥರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ವಾರಸುದಾರರಿಗೆ ಒಪ್ಪಿಸಲಾಯಿತು.
Next Story





