31ರಂದು ಸಚಿವ ಆಂಜನೇಯ ಗ್ರಾಮ ವಾಸ್ತವ್ಯ
ಉಡುಪಿ, ಡಿ.26: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಎಚ್.ಆಂಜನೇಯ ಡಿ.31ರಂದು ಕುಂದಾಪುರ ತಾಲೂಕಿನ ಕಾಲ್ತೋಡು ಗ್ರಾಪಂ ವ್ಯಾಪ್ತಿಯ ಮೂರೂರು ಕೊರಗರ ಕಾಲನಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಸಚಿವರು ಕುಂದಾಪುರ ತಾಲೂಕಿನ ವಿವಿಧ ಗಿರಿಜನ ಹಾಡಿಗಳಿಗೆ ಭೆೇಟಿ ನೀಡಿ, ಮೂರೂರು ಕೊರಗರ ಕಾಲನಿಯಲ್ಲಿ ಜಿಲ್ಲೆಯ ಕೊರಗ ಸಮುದಾಯದವರೊಂದಿಗೆ ಸಮಾಲೋಚನೆ ನಡೆಸಿ, ಅವರ ಸಮಸ್ಯೆಗೆ ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಸೂಚಿಸಿ ವಿವಿಧ ಇಲಾಖೆ /ನಿಗಮಗಳಿಂದ ಸವಲತ್ತು ವಿತರಣೆ ಮಾಡಿ ರಾತ್ರಿ ವಾಸ್ತವ್ಯ ಮಾಡಲಿರುವರು ಎಂದು ಪ್ರಕಟನೆ ತಿಳಿಸಿದೆ.
Next Story





