ವಿಷಾಹಾರ ಸೇವನೆಯಿಂದ 100 ಜನರು ಆಸ್ಪತ್ರೆಗೆ ದಾಖಲು
ಮಲಪ್ಪುರಂ,ಡಿ.26: ಮಲಪ್ಪುರಂ ಜಿಲ್ಲೆಯ ಪೆರಿತಲಮಣ್ಣ ಸಮೀಪದ ಶಿಕ್ಷಣ ಸಂಸ್ಥೆಯೊಂದರ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಸುಮಾರು 100 ಜನರು ಶಂಕಿತ ವಿಷಾಹಾರ ಸೇವನೆಯ ಬಳಿಕ ತೀವ್ರ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಚೆರುಕರದಲ್ಲಿರುವ ಅಲಿಗಡ ಮುಸ್ಲಿಮ್ ವಿಶ್ವವಿದ್ಯಾನಿಲಯದ ಮಲಪ್ಪುರಂ ಕೇಂದ್ರದಲ್ಲಿ ನಿನ್ನೆ ರಾತ್ರಿ ಊಟದ ಬಳಿಕ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ವಾಂತಿ ಮಾಡಿಕೊಳ್ಳತೊಡಗಿದ್ದರು. ಅವರನ್ನು ತಕ್ಷಣವೇ ಪೆರಿಂತಲಮಣ್ಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದರು.
ಈ ಪೈಕಿ 26 ಜನರು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇತರರ ದೇಹಸ್ಥಿತಿ ಸ್ಥಿರವಾಗಿದ್ದು, ವೈದ್ಯರು ನಿಗಾ ಇರಿಸಿದ್ದಾರೆ. ಸಂಸ್ಥೆಯ ಅಧಿಕಾರಿಗಳು ಈ ಘಟನೆಯ ಬಗ್ಗೆ ಆಂತರಿಕ ತನಿಖೆಗೆ ಆದೇಶಿಸಿದ್ದಾರೆ.
Next Story





