ನೆಲಮಂಗಲದಲ್ಲಿ ಗಾರ್ಮೆಂಟ್ಸ್‌ಗೆ ನೌಕರರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ; ಓರ್ವ ಮಹಿಳೆಯ ಸಾವು

ನೆಲಮಂಗಲ, ಡಿ.27: ಗಾರ್ಮೆಂಟ್ಸ್‌ಗೆ ನೌಕರರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ನೆಲಮಂಗಲದ ಬೊಮ್ಮನಹಳ್ಳಿ ಬಳಿ ಇಂದು ಬೆಳಗ್ಗೆ ನಡೆದಿದೆ.
ಟೆಕ್ಸ್‌ಪೋರ್ಟ್ ಎಂಬ ಗಾರ್ಮೆಂಟ್ಸ್‌ಗೆ ಸೇರಿದ ಬಸ್ ಮಗುಚಿಬಿದ್ದ ಘಟನೆಯಲ್ಲಿ ಗಾರ್ಮೆಂಟ್ಸ್ ಸಂಸ್ಥೆಯ ಉದ್ಯೋಗಿ ಕಮಲಮ್ಮ(30) ಎಮಬವರು ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಹಿಳೆಯರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ನಿರ್ಲಕ್ಷ್ಯತನವೇ ಈ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.
ಆಪಘಾತದಿಂದಾಗಿ ಬೆಂಗಳೂರು ಹಾಗೂ ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವಲ್ಪ ಹೊತ್ತು ಟ್ರಾಪಿಕ್ ಜಾಮ್ ಆಗಿ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





