ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಯತ್ನ : ಬಜರಂಗದಳದ ಕಾರ್ಯಕರ್ತನ ಬಂಧನ

ಬೆಳ್ತಂಗಡಿ, ಡಿ.27 : ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ನಿಡ್ಲೆ ನಿವಾಸಿ ರಿಕ್ಷ ಚಾಲಕ ಉಮೇಶ್ (25) ಎಂಬವನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಾಲಕಿಯು ನಾಲ್ಕನೇ ತರಗತಿಯ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.
ಡಿ. 24 ರಂದು ನಿಡ್ಲೆ ಗ್ರಾಮದ ಮಾಪಲಾಜೆ ಎಂಬಲ್ಲಿ ಬಾಲಕಿ ಒಬ್ಬಳೇ ಇದ್ದ ಸಮಯ ಆರೋಪಿಯು ಮನೆಗೆ ಅಕ್ರಮ ಪ್ರವೇಶ ಮಾಡಿ ಬಾಲಕಿಯ ಮಾನಭಂಗಕ್ಕೆ ಯತ್ನಿಸಿರುತ್ತಾನೆ. ಈ ಬಗ್ಗೆ ಬಾಲಕಿಯ ತಾಯಿಯು ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಆದರೆ ಆರೋಪಿಯು ಬಜರಂಗದಳದ ಸಕ್ರಿಯ ಕಾರ್ಯಕರ್ತನಾಗಿದ್ದು , ಬಜರಂಗದಳದ ಒತ್ತಡದಿಂದಾಗಿ ದೂರು ದಾಖಲಿಸಲಾಗಲಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ.
ಇದೀಗ ಆರೋಪಿಯನ್ನು ಬಂಧಿಸಲಾಗಿದ್ದು , ಧಮ೯ಸ್ಥಳ ಪೊಲೀಸು ಠಾಣೆಯಲ್ಲಿ ಪೊಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.
Next Story





