ಶಿಕ್ಷಣ ಸಂಸ್ಥೆಗಳಲ್ಲಿ ಸಮಾಲೋಚನಾ ಕೇಂದ್ರ ಅಗತ್ಯ: ಡಾ.ಶಾನ್‌ಭಾಗ್

ಶಿರ್ವ, ಡಿ.27: ಶಾಲಾಕಾಲೇಜುಗಳಲ್ಲಿ ಮಾನವ ಹಕ್ಕುಗಳು ಮತ್ತು ಬಳಕೆ ದಾರರ ಹಕ್ಕುಗಳ ಬಗ್ಗೆ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಸಮಾಲೋಚನಾ ಕೇಂದ್ರಗಳನ್ನು ಸ್ಥಾಪಿಸುವ ಅಗತ್ಯವಿದೆ ಎಂದು ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ.ರವೀಂದ್ರನಾಥ್ ಶಾನ್‌ಭಾಗ್ ಹೇಳಿದ್ದಾರೆ.
ಬಂಟಕಲ್ಲಿನ ಶ್ರೀಮಧ್ವವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಇತ್ತೀಚೆಗೆ ಅವರು ವಿಶೇಷ ಉಪನ್ಯಾಸ ನೀಡಿ ಮಾತನಾಡುತಿದ್ದರು. ಪ್ರತಿಷ್ಠಾನದ ಮೂಲಕ 4200 ಕ್ಲಿಷ್ಟಕರವಾದ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದು ತಮ್ಮ ಮಕ್ಕಳಿಂದಲೇ ಹೆತ್ತವರು ನೋವಿಗೊಳಗಾಗುತ್ತಿದ್ದಾರೆ ಎಂದು ಅವರು ವಿಷಾಧ ವ್ಯಕ್ತಪಡಿಸಿದರು.
ಸಂಸ್ಥೆಯ ಕಾರ್ಯದರ್ಶಿ ರತ್ನಕುಮಾರ್, ಪ್ರಾಂಶುಪಾಲ ಪ್ರೊ.ಡಾ. ತಿರುಮಲೇಶ್ವರ ಭಟ್ ಮೊದಲಾದವರು ಉಪಸ್ಥಿತರಿದ್ದರು.
Next Story





