ಬಿಜೆಪಿಗರು ವಿಷದ ಹಾವಾದರೆ ಕಾಂಗ್ರೆಸ್ಸಿಗರು ವಿಷದ ಜಂತು : ನಳಿನ್ ಕುಮಾರ್ ಕಟೀಲ್

ಮುಲ್ಕಿ, ಡಿ.27: ಎತ್ತಿನಹೊಳೆ ಯೋಜನೆ ಬಗ್ಗೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳು ದರ್ಪ ಮತ್ತು ಅಹಂಕಾರ ತೋರಿಸಿದ್ದಾರೆ ಎಂದು ನಳಿನ್ ಕುಮಾರ್ ಆರೋಪಿಸಿದ್ದಾರೆ.
ಅವರು ಕಟೀಲಿನ ಶಾಲೆ ವಾರ್ಷಿಕ ಮಹೋತ್ಸವದಲ್ಲಿ ಭಾಗವಹಿಸಿ ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದರು. ಅಧಿಕಾರದ ದಾಹ ಹಾಗೂ ವ್ಯಾಮೋಹದಿಂದ ದಕ್ಷಿಣ ಕನ್ನಡ ಜಿಲ್ಲೆಯ ಸಚಿವರು ಹಾಗೂ ಶಾಸಕರು ಜಿಲ್ಲೆಯನ್ನು ಬಲಿ ಕೊಡಲು ಎತ್ತನಹೊಳೆ ಯೋಜನೆ ಬಗ್ಗೆ ಮುಖ್ಯಮಂತ್ರಿಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಜಿಲ್ಲೆಯ ಸಚಿವರು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಯೋಜನೆ ವಿರುದ್ಧ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದರು.
ದ.ಕ ಜಿಲ್ಲೆಯ ಉಸ್ತುವಾರಿ ಸಚಿವ ಬಿಜೆಪಿಯವರನ್ನು ಎರಡು ತಲೆಯ ಹಾವು ಎಂದಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ನಳಿನ್, ಕಾಂಗ್ರೆಸ್ಸಿಗರು ವಿಷದ ಜಂತು ಎಂದು ಆಕ್ರೋಶ ವ್ಯಕ್ತಪಡಿಸಿದರು.
Next Story





