ಹಳೆ ನೋಟು ಇದ್ದರೆ ದಂಡ
ಸುಗ್ರೀವಾಜ್ಞೆಗೆ ಕೇಂದ್ರ ಸಂಪುಟ ಸಮ್ಮತಿ

ಹೊಸದಿಲ್ಲಿ, ಡಿ.28: ಹಳೆಯ 500 ಹಾಗೂ 1000 ರೂ. ಮುಖಬೆಲೆಯ ಹಳೆೆ ನೋಟು ಬಳಕೆಯನ್ನು ನಿಷೇಧಿಸುವ ಸಂಬಂಧ ಸುಗ್ರೀವಾಜ್ಞೆ ಹೊರಡಿಸಲು ಕೇಂದ್ರ ಸಚಿವ ಸಂಪುಟ ಸಭೆ ಸಮ್ಮತಿ ಸೂಚಿಸಿದೆ.
ಮಾ.31ರ ಬಳಿಕ ಹೆಚ್ಚು ಹಳೆ ನೋಟುಗಳನ್ನು ಇಟ್ಟುಕೊಳ್ಳುವಂತಿಲ್ಲ. ಹಳೆಯ ನೋಟುಗಳನ್ನು ಇಟ್ಟುಕೊಂಡರೆ ದಂಡ ವಿಧಿಸುವ ಜೊತೆಗೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ. 4 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ. 10,000ಕ್ಕಿಂತ ಹೆಚ್ಚು ಹಳೆಯ ನೋಟು ಇಟ್ಟುಕೊಂಡರೆ ಹತ್ತು ಪಟ್ಟು ಹೆಚ್ಚು ದಂಡ ತೆರಬೇಕಾಗುತ್ತದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ಇಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಸುಗ್ರೀವಾಜ್ಞೆ ಪ್ರತಿಯನ್ನು ರಾಷ್ಟ್ರಪತಿ ಪ್ರಣವ್ ಮುಖರ್ಜಿಗೆ ಕಳುಹಿಸಿಕೊಡಲಾಗುತ್ತದೆ.
Next Story





