ಮನಪಾ ವಿರುದ್ಧ ಬಿಜೆಪಿ ಪ್ರತಿಭಟನೆ
.gif)
ಮಂಗಳೂರು, ಡಿ.28: ಮಂಗಳೂರು ಮಹಾನಗರ ಪಾಲಿಕೆಯ ಕಾಂಗ್ರೆಸ್ ಆಡಳಿತದ ಕಾರ್ಯವೈಖರಿಯನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಬುಧವಾರ ಮನಪಾ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.
ಮನಪಾ ಆಡಳಿತ ವ್ಯವಸ್ಥೆ ಕುಸಿಯುತ್ತಿದೆ. ಅಭಿವೃದ್ಧಿ ಕುಂಠಿತಗೊಳ್ಳುತ್ತಿವೆ. ದಿನಕ್ಕೊಂದು ಹೊಸ ಘೋಷಣೆ, ಭರವಸೆ ನೀಡಿ ಪ್ರಚಾರ ಗಿಟ್ಟಿಸುತ್ತಿದೆಯೇ ವಿನ: ಸೂಕ್ತ ಆಡಳಿತ ನೀಡುತ್ತಿಲ್ಲ. ಆಸ್ತಿ ತೆರಿಗೆಯನ್ನು ಶೇ.15ರಷ್ಟು ಹೆಚ್ಚಿಸಿ ವಿಶ್ವಾಸದ್ರೋಹ ಮಾಡಿದೆ ಎಂದು ಮನಪಾ ಪ್ರತಿಪಕ್ಷ ನಾಯಕಿ ರೂಪಾ ಡಿ.ಬಂಗೇರ ಆರೋಪಿಸಿದರು.
ನೀರಿನ ಕನಿಷ್ಠ ದರವನ್ನು 100 ರೂ. ಏರಿಸಿರುವುದು ಖಂಡನೀಯ. ಉತ್ತಮ ಆಡಳಿತ ನೀಡುತ್ತೇವೆ ಎಂದು ಹೇಳಿ ಅಧಿಕಾರಕ್ಕೇರಿದ್ದ ಕಾಂಗ್ರೆಸ್ ಜನರಿಗೆ ಹೊಣೆಯಾಗುವ ನಿಯಮಗಳನ್ನು ಜಾರಿಗೊಳಿಸಲು ಮುಂದಾಗುತ್ತಿವೆ ಎಂದು ರೂಪಾ ಡಿ.ಬಂಗೇರಾ ಹೇಳಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ ಹಾಗು ಬಿಜೆಪಿಯ ಕಾರ್ಪೊರೇಟರ್‌ಗಳು ಪಾಲ್ಗೊಂಡಿದ್ದರು.
Next Story





