ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ರಾಜೇಶ್ವರಿ ಶೆಟ್ಟಿ ಜಾಮೀನು ಅರ್ಜಿ ತಿರಸ್ಕೃತ

ಉಡುಪಿ, ಡಿ.28: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಒಂದನೆ ಆರೋಪಿ ರಾಜೇಶ್ವರಿ ಶೆಟ್ಟಿಯ ಜಾಮೀನು ಅರ್ಜಿಯನ್ನು ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯವು ಇಂದು ತಿರಸ್ಕರಿಸಿದೆ.
ಆರೋಪಿ ಪರ ವಕೀಲ ಅರುಣ್ ಬಂಗೇರ ಹಾಗೂ ಸರಕಾರಿ ವಿಶೇಷ ಅಭಿಯೋಜಕ ಶಾಂತರಾಮ್ ಶೆಟ್ಟಿಯವರ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶ ಟಿ.ವೆಂಕಟೇಶ್ ನಾಯ್ಕಾ ಬಳಿಕ ಈ ತೀರ್ಪು ನೀಡಿದ್ದಾರೆ.
ರಾಜೇಶ್ವರಿ ಶೆಟ್ಟಿಗೆ ಜಾಮೀನು ನೀಡುವಂತೆ ಕೋರಿ ವಕೀಲ ಅರುಣ್ ಬಂಗೇರ ಅ.4ರಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಸಂದರ್ಭ ದಲ್ಲಿದ್ದ ಸರಕಾರಿ ಅಭಿಯೋಜಕಿ ಶಾಂತಿ ಬಾಯಿ ಇದಕ್ಕೆ ಆಕ್ಷೇಪಣೆ ಸಲ್ಲಿಸಿ ದ್ದರು. ಈ ಮಧ್ಯೆ ಸರಕಾರ ಶಾಂತರಾಮ್ ಶೆಟ್ಟಿ ಅವರನ್ನು ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕರಾಗಿ ನೇಮಕ ಮಾಡಿತು. ಅಲ್ಲದೆ ನಂತರ ನ್ಯಾಯಾ ಧೀಶರು ಕೂಡ ಬದಲಾದ ಕಾರಣ ಇದರ ಕಾನೂನು ಪ್ರಕ್ರಿಯೆ ನಡೆಯಲು ವಿಳಂಬವಾಗಿತ್ತು.
ಅರ್ಜಿಗೆ ಸಂಬಂಧಿಸಿದಂತೆ ಆರೋಪಿ ಪರ ವಕೀಲ ಅರುಣ್ ಬಂಗೇರ ಅವರ ವಾದ ಹಾಗೂ ಸರಕಾರಿ ವಿಶೇಷ ಅಭಿಯೋಜಕ ಶಾಂತರಾಮ್ ಶೆಟ್ಟಿ ಅವರ ಪ್ರತಿವಾದವನ್ನು ಪರಿಶೀಲಿಸಿದ ನ್ಯಾಯಾಧೀಶ ಟಿ.ವೆಂಕಟೇಶ್ ನಾಯ್ಕಾ ಅರ್ಜಿಯನ್ನು ತಿರಸ್ಕರಿಸಿ ಆದೇಶಿಸಿದರು.
ರಾಜೇಶ್ವರಿ ಮಾಡಿರುವ ಈ ಘೋರ ಅಪರಾಧವು ಸಮಾಜ ಮತ್ತು ಅವರ ಕುಟುಂಬಕ್ಕೆ ಮಾರಕವಾಗಿದ್ದು, ಆರೋಪಿ ಮಹಿಳೆಯಾದರು ಆಕೆ ಜಾಮೀನಿಗೆ ಅರ್ಹರಲ್ಲ. ಆದುದರಿಂದ ಆಕೆಯ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ನ್ಯಾಯಾಧೀಶರು ತಮ್ಮ ಆದೇಶದಲ್ಲಿ ಉಲ್ಲೇಖಿಸಿ ರುವುದಾಗಿ ಶಾಂತಾರಾಮ್ ಶೆಟ್ಟಿ ತಿಳಿಸಿದ್ದಾರೆ.







