ನಂಜನಗೂಡಿನಲ್ಲಿ ಕಾಂಗ್ರೆಸ್ ಧೂಳೀಪಟ : ಜನಾರ್ದನ ಪೂಜಾರಿ

ಮಂಗಳೂರು, ಡಿ. 28: ಮುಂಬರುವ ನಂಜನಗೂಡು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಧೂಳೀಪಟವಾಗಲಿದೆ ಎಂದು ಜನಾರ್ದನ ಪೂಜಾರಿ ಭವಿಷ್ಯ ನುಡಿದಿದ್ದಾರೆ.
ಮಾಜಿ ಶಾಸಕ ಶ್ರೀನಿವಾಸ್ ಪ್ರಸಾದ್‌ರ ರಾಜೀನಾಮೆಯಿಂದ ತೆರವಾಗಿರುವ ನಂಜನಗೂಡು ಕ್ಷೇತ್ರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಎಷ್ಟೇ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೂ ಜಯ ಸಾಧಿಸಲಾಗದು. ಈಗಾಗಲೇ ಶ್ರೀನಿವಾಸ್ ಪ್ರಸಾದ್ ಅವರು ಆ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಮಾನ ಹರಾಜು ಹಾಕಿದ್ದಾರೆ. ಆದ್ದರಿಂದ ಆ ಕ್ಷೇತ್ರ ಕಾಂಗ್ರೆಸ್ ಕಳೆದುಕೊಳ್ಳಲಿದೆ ಎಂದರು.
Next Story





