ಭಟ್ಕಳ : ಅಸ್ಬಾ ಉದ್ಯಾವರ್ ಗೆ ' ನಜ್ಮೆ ಇಖ್ವಾನ್ ' ಚಿನ್ನದ ಪದಕ ಪ್ರದಾನ

ಭಟ್ಕಳ, ಡಿ.28 : ತರಬಿಯತ್ ಎಜ್ಯುಕೇಶನ್ ಸೂಸೈಟಿಯ ಶಮ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರತಿಷ್ಟಿತ ನಜ್ಮೆ ಇಖ್ವಾನ್ ಚಿನ್ನದ ಪದಕ ಹಾಗೂ ಪ್ರಶಸ್ತಿಯನ್ನು ಅಸ್ಬಾ ಉದ್ಯಾವರ್ ಗೆ ಬುಧವಾರ ಜರಗಿದ ಶಾಲಾವಾರ್ಷೀಕೋತ್ಸವ ಸಮಾರಂಭದಲ್ಲಿ ಡಾ.ಎಸ್.ಎಮ್.ಸೈಯ್ಯದ್ ಖಲೀಲುರ್ರಹ್ಮಾನ್ ಪ್ರದಾನಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು , ಪಾಲಕರು ತಮ್ಮ ಮಕ್ಕಳ ಲಾಲನೆ ಪಾಲನೆಯೊಂದಿಗೆ ಅವರಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸುವಲ್ಲಿ ಶ್ರಮಿಸಬೇಕು. ಮಕ್ಕಳು ತಂದೆಗಿಂತಲೂ ತಾಯಿಯೊಂದಿಗೆ ಬಹಳ ಹತ್ತಿರದಲ್ಲಿರುತ್ತಾರೆ ಅವರ ಸಾರ್ವಾಂಗೀಣ ಅಭಿವೃದ್ಧಿಯಲ್ಲಿ ಮಾತೆ ಮಹತ್ತರ ಪಾತ್ರ ವಹಿಸುತ್ತಾಳೆ ಎಂದರು.
ಗೌರವ ಅತಿಥಿಯಾಗಿ ಉಪಸ್ಥಿತರಿದ್ದ ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ಅಧ್ಯಕ್ಷ ಎಂ.ಎ ಗಫೂರ್ ಮಾತನಾಡಿ, ಸರ್ಕಾರ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗ ಹಲವು ವಿಶೇಷ ಸೌಲಭ್ಯಗಳನ್ನು ನೀಡುತ್ತಿದೆ ಅದರ ಪ್ರಯೋಜನ ಪಡೆದು ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು.
ಸಂಸ್ಥೆಯ ಸ್ಕೂಲ್ ಬೋರ್ಡ್ ಅಧ್ಯಕ್ಷ ಕಾದಿರ್ ಮೀರಾ ಪಟೇಲ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಉಪಾಧ್ಯಕ್ಷ ಸೈಯ್ಯದ್ ಅಶ್ರಫ್ ಬರ್ಮಾವರ್, ಮಾಜಿ ಅಧ್ಯಕ್ಷ ಇಕ್ಬಾಲ್ ಇಕ್ಕೇರಿ, ಆಡಳಿತ ಮಂಡಳಿ ಸದಸ್ಯರಾದ ಡಾ.ಮುಹಮ್ಮದ್ ಹನೀಫ್ ಶಬಾಬ್, ಮೌಲಾನ ಅಝೀಝುರ್ರಹ್ಮಾನ್ ನದ್ವಿ ರುಕ್ನುದ್ದೀನ್, ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯ ಅಧ್ಯಕ್ಷ ಮುಜಾಹಿದ್ ಮುಸ್ತಫಾ ಸೇರಿದಂತೆ ಶಾಲೆಯ ವಿವಿಧ ಸಮಿತಿ ವಿದ್ಯಾರ್ಥಿ ನಾಯಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮುಖ್ಯಾಧ್ಯಾಪಕ ಮುಹಮ್ಮದ್ ರಝಾ ಮಾನ್ವಿ ಸ್ವಾಗತಿಸಿದರು.
ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ತಲ್ಹಾ ಸಿದ್ದಿಬಾಪ ಶಾಲಾ ವಾರ್ಷಿಕ ವರದಿ ವಾಚಿಸಿದರು.
ವಿದ್ಯಾರ್ಥಿಗಳಾದ ಅಸ್ಪಾ ಉದ್ಯಾವರ್, ಕಬ್ಬಾಬ್ ರುಕ್ನುದ್ದೀನ್ ಕಾರ್ಯಕ್ರಮ ನಿರುಪಿಸಿದರು. ಶಿಕ್ಷಕ ಶಾಝಿರ್ ಹುಸೇನ್ ವಂದಿಸಿದರು.







