Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಜೀವ ಅಧ್ಯಕ್ಷ ಸ್ಥಾನ ನಿರಾಕರಿಸಿದ...

ಆಜೀವ ಅಧ್ಯಕ್ಷ ಸ್ಥಾನ ನಿರಾಕರಿಸಿದ ಕಲ್ಮಾಡಿ

ಐಒಎಗೆ ಕ್ರೀಡಾ ಸಚಿವಾಲಯದ ಶೋಕಾಸ್ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ28 Dec 2016 11:39 PM IST
share

ಹೊಸದಿಲ್ಲಿ,ಡಿ.28: ಕಳಂಕಿತ ಮಾಜಿ ಅಧ್ಯಕ್ಷರಾದ ಸುರೇಶ ಕಲ್ಮಾಡಿ ಮತ್ತು ಅಭಯಸಿಂಗ್ ಚೌತಾಲಾ ಅವರನ್ನು ತನ್ನ ಆಜೀವ ಅಧ್ಯಕ್ಷರನ್ನಾಗಿ ನೇಮಕಗೊಳಿಸಿದ್ದ ಭಾರತೀಯ ಒಲಿಂಪಿಕ್ಸ್ ಸಂಸ್ಥೆ(ಐಒಎ)ಯ ಕ್ರಮ ವ್ಯಾಪಕ ಟೀಕೆಗಳಿಗೆ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಕಲ್ಮಾಡಿ ಬುಧವಾರ ಈ ಹುದ್ದೆಯನ್ನು ನಿರಾಕರಿಸಿದ್ದರೆ, ಐಒಎದ ವಿವಾದಾತ್ಮಕ ನಿರ್ಧಾರಕ್ಕಾಗಿ ಕ್ರೀಡಾ ಸಚಿವಾಲಯವು ಅದಕ್ಕೆ ಶೋಕಾಸ್ ನೋಟಿಸನ್ನು ಹೊರಡಿಸಿದೆ. ಈ ಇಬ್ಬರನ್ನೂ ಆಜೀವ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸದಿದ್ದರೆ ಐಒಎ ಜೊತೆ ಸಂಬಂಧ ಕಡಿದುಕೊಳ್ಳುವುದಾಗಿ ಬೆದರಿಕೆಯನ್ನೂ ಅದು ಒಡ್ಡಿದೆ.

ಕಲ್ಮಾಡಿಯವರು ಸ್ಥಾನವನ್ನು ಸ್ವೀಕರಿಸದಿರಲು ನಿರ್ಧರಿಸಿದ್ದಾರೆ. ಐಒಎ ತನ್ನನ್ನು ಆಜೀವ ಅಧ್ಯಕ್ಷನನ್ನಾಗಿ ನೇಮಿಸಲಿದೆ ಎಂಬ ವಿಷಯವೂ ಅವರಿಗೆ ಗೊತ್ತಿರಲಿಲ್ಲ. ಆರೋಪಮುಕ್ತ ಗೊಳ್ಳುವವರೆಗೂ ಯಾವುದೇ ಸ್ಥಾನವನ್ನು ಸ್ವೀಕರಿಸಲು ಅವರು ನಿರಾಕರಿಸಿದ್ದಾರೆ ಎಂದು ಕಲ್ಮಾಡಿಪರ ವಕೀಲ ಹಿತೇಶ ಜೈನ್ ಅವರು ಟಿವಿ ವಾಹಿನಿಯೊಂದಕ್ಕೆ ತಿಳಿಸಿದರು.
 ಮಂಗಳವಾರ ಚೆನ್ನೈನಲ್ಲಿ ನಡೆದ ತನ್ನ ವಾರ್ಷಿಕ ಮಹಾಸಭೆಯಲ್ಲಿ ಕಲ್ಮಾಡಿ ಮತ್ತು ಚೌತಾಲಾರಿಗೆ ಆಜೀವ ಅಧ್ಯಕ್ಷ ಸ್ಥಾನಗಳನ್ನು ನೀಡಲು ಐಒಎ ನಿರ್ಧರಿಸಿತ್ತು.
ಐಒಎ ಕ್ರಮ ಅದರ ಸಂವಿಧಾನಕ್ಕೆ ವಿರುದ್ಧವಾಗಿದೆ. ಕ್ರೀಡಾ ಸಚಿವಾಲಯವು ಇದನ್ನು ಒಪ್ಪಿಕೊಳ್ಳುವುದಿಲ್ಲ. ಕಲ್ಮಾಡಿ ಮತ್ತು ಚೌತಾಲಾ ಭ್ರಷ್ಟಾಚಾರ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ನಾವು ಕ್ರೀಡೆಗಳಲ್ಲಿ ಪಾರದರ್ಶಕತೆಯನ್ನು ಬಯಸಿದ್ದೇವೆ. ಈ ಇಬ್ಬರೂ ರಾಜೀನಾಮೆ ನೀಡುವವರೆಗೆ ಅಥವಾ ವಜಾಗೊಳ್ಳುವವರೆಗೆ ನಾವು ಐಒಎ ಜೊತೆ ವ್ಯವಹರಿಸುವುದಿಲ್ಲ ಎಂದು ಕೇಂದ್ರ ಕ್ರೀಡಾಸಚಿವ ವಿಜಯ ಗೋಯೆಲ್ ಅವರು ಸುದ್ದಿಗಾರರಿಗೆ ತಿಳಿಸಿದರು.

 
ಗೋಯೆಲ್ ವಿರುದ್ಧ ದಾಳಿನಡೆಸುವ ಮೂಲಕ ತನ್ನನ್ನು ಸಮರ್ಥಿಸಿಕೊಂಡಿರುವ ಚೌತಾಲಾ, ಸಚಿವರ ಪ್ರತಿಕ್ರಿಯೆ ತನಗೆ ಅಚ್ಚರಿಯನ್ನುಂಟು ಮಾಡಿದೆ. ತನ್ನ ವಿರುದ್ಧ ಕ್ರಿಮಿನಲ್ ಮತ್ತು ಭ್ರಷ್ಟಾಚಾರದ ಪ್ರಕರಣಗಳಿವೆ ಎಂದು ಅವರು ಹೇಳುತ್ತಿದ್ದಾರೆ. ಆದರೆ ತನ್ನ ವಿರುದ್ಧ ಇರುವುದು ರಾಜಕೀಯ ಪ್ರಕರಣವೇ ಹೊರತು ಕ್ರಿಮಿನಲ್ ಪ್ರಕರಣವಲ್ಲ ಎಂದಿದ್ದಾರೆ.
1996-2011ರ ಅವಧಿಯಲ್ಲಿ ಐಒಎ ಅಧ್ಯಕ್ಷರಾಗಿದ್ದ ಕಲ್ಮಾಡಿ 2010ರ ದಿಲ್ಲಿ ಕಾಮನ್‌ವೆಲ್ತ್ ಕ್ರೀಡೆಗಳಲ್ಲಿ ಭ್ರಷ್ಟಾಚಾರ ಹಗರಣದಲ್ಲಿ ಭಾಗಿಯಾಗಿದ್ದ ಆರೋಪವನ್ನು ಹೊತ್ತಿದ್ದು, 10 ತಿಂಗಳು ಜೈಲುವಾಸವನ್ನು ಅನುಭವಿಸಿ ಜಾಮೀನಿನಲ್ಲಿ ಬಿಡುಗಡೆ ಗೊಂಡಿದ್ದಾರೆ.
ಚೌತಾಲಾ 2012,ಡಿಸೆಂಬರ್-2014,ಫೆಬ್ರವರಿ ಅವಧಿಯಲ್ಲಿ ಐಒಎ ಅಧ್ಯಕ್ಷ ರಾಗಿದ್ದರು. ಈ ವೇಳೆ ನ್ಯಾಯಾಲಯದಲ್ಲಿ ಅರೋಪಪಟ್ಟಿ ಸಲ್ಲಿಸಲ್ಪಟ್ಟಿರುವ ವ್ಯಕ್ತಿಗಳನ್ನು ಚುನಾವಣೆಗೆ ನಿಲ್ಲಿಸಿದ್ದಕ್ಕಾಗಿ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯು ಐಒಎ ಅನ್ನು ಅಮಾನತುಗೊಳಿಸಿತ್ತು ಮತ್ತು ಐಒಎ ಅಧ್ಯಕ್ಷರಾಗಿ ಚೌತಾಲಾ ಆಯ್ಕೆಯನ್ನು ರದ್ದುಗೊಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X