ಸಿದ್ದಾಪುರ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಚ್ಛತಾ ಕಾರ್ಯಕ್ರ,ಮ

ಸಿದ್ದಾಪುರ, ಡಿ.29: ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಸ್ವಚ್ಚತಾ ಅಭಿಯಾನವನ್ನು ಸಿದ್ದಾಪುರ ಗ್ರಾಮ ಪಂಚಾಯತ್ ನಲ್ಲಿ ನಡೆಯಿತು.
ಆ ಅಭಿಯಾನವನ್ನು ಪಂಚಾಯತ್ ಅಧ್ಯೆಕ್ಷೆ ಶ್ರೀಮತಿ ಸರೋಜಿನಿ ಶೆಟ್ಟಿ ಉದ್ಘಾಟಿಸಿ ಸ್ವಚ್ಚತೆಗೆ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಬ್ಯಾರೀಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಶಮೀರ್, ಪಂಚಾಯತ್ ಉಪಾಧ್ಯಕ್ಷರಾದ ಭರತ್ ಕಾಮತ್ ಹಾಗೂ ಪಂಚಾಯತ್ ಸರ್ವ ಸದಸ್ಯರು ಮತ್ತು ಪದವಿ ಕಾಲೇಜಿನ ಉಪನ್ಯಾಸಕ ವೃಂದ ಉಪಸ್ಥಿತರಿದ್ದರು. ಸಹ ಶಿಬಿರಾಧಿಕಾರಿ ಶ್ರೀ ಸಂದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಶಿಭಿರಾಧಿಕಾರಿ ಶ್ರೀ ವಿದ್ಯಾದರ್ ಪೂಜಾರಿ ವಂದಿಸಿದರು.
Next Story





