ದಟ್ಟ ಮಂಜು ಹಿನ್ನೆಲೆ; ವಿಮಾನ ಹಾರಾಟದಲ್ಲಿ ವ್ಯತ್ಯಯ

ಬೆಂಗಳೂರು, ಡಿ.29: ಕೆಂಪೇಗೌಡ ಅಂತಾರಾಷ್ಟ್ರಿಯಾ ವಿಮಾನ ನಿಲ್ಥಾಣದಲ್ಲಿ ದಟ್ಟ ಮಂಜು ಕವಿದ ಹಿನ್ನೆಲೆಯಲ್ಲಿ 43 ಕ್ಕೂ ಹೆಚ್ಚಿನ ದೇಶಿಯ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಇಂದು ಮುಂಜಾನೆ 5 ಗಂಟೆಯಿಂದಲೂ ದಟ್ಟವಾದ ಮಂಜು ಕವಿದಿದ್ದು ವಿಮಾನಗಳ ಹಾರಾಟದಲ್ಲಿ ಭಾರಿ ವ್ಯತ್ಯಯವಾಗಿದೆ. ಮುಂಜಾನೆ 5 ಗಂಟೆಯಿಂದ ಬೆಳಗ್ಗೆ 8 ಗಂಟೆಯವರೆಗೂ ಸುಮಾರು 43 ದೇಶಿಯ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದ್ದು, ಮೂರು ಅಂತಾರಾಷ್ಟ್ರೀಯ ವಿಮಾನಗಳನ್ನು ಚನ್ನೈ ವಿಮಾನ ನಿಲ್ದಾಣಕ್ಕೆ ಡೈವರ್ಟ್ ಮಾಡಲಾಗಿದೆ. ಇನ್ನೂ ಕೆಂಪೇಗೌಡ ಅಂತಾರಾಷ್ಟ್ರಿಯಾ ವಿಮಾನ ನಿಲ್ದಾಣ ಸೇರಿದಂತೆ ದೇವನಹಳ್ಳಿ ಸುತ್ತಾಮುತ್ತಾ ತಾಪಮಾನ ಕನಿಷ್ಠ ಮಟ್ಟಕ್ಕೆ ತಲುಪಿದ್ದು ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜಿನಿಂದಾಗಿ 9 ಗಂಟೆ ನಂತರ ವಿಮಾನಗಳ ಹಾರಾಟಗಳು ಪ್ರಾರಂಭವಾಗಬಹುದೆಂದು ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Next Story





