Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ರದ್ದತಿ: 50 ದಿನಗಳ ಅವಧಿಯ ಕೊನೆಗೆ...

ನೋಟು ರದ್ದತಿ: 50 ದಿನಗಳ ಅವಧಿಯ ಕೊನೆಗೆ ಪ್ರಧಾನಿ ದೇಶದ ಕ್ಷಮೆ ಯಾಚಿಸಬೇಕು: ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ29 Dec 2016 7:49 PM IST
share
ನೋಟು ರದ್ದತಿ: 50 ದಿನಗಳ ಅವಧಿಯ ಕೊನೆಗೆ ಪ್ರಧಾನಿ ದೇಶದ ಕ್ಷಮೆ ಯಾಚಿಸಬೇಕು: ಕಾಂಗ್ರೆಸ್

ಜೈಪುರ/ಶ್ರೀನಗರ, ಡಿ.29: ಹೊಸ ವರ್ಷದ ಮುನ್ನಾ ದಿನದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ, ನೋಟು ರದ್ದತಿಯಿಂದ ಜನರಿಗಾಗಿರುವ ತೊಂದರೆಗಾಗಿ ರಾಷ್ಟ್ರದ ಕ್ಷಮೆ ಯಾಚಿಸಬೇಕೆಂದು ಕಾಂಗ್ರೆಸ್ ಇಂದು ಆಗ್ರಹಿಸಿದೆ. ಜ.6ರಿಂದ ದೇಶವ್ಯಾಪಿ ಪ್ರತಿಭಟನೆ ನಡೆಸುವ ಪ್ರತಿಜ್ಞೆಯನ್ನು ಅದು ಕೈಗೊಂಡಿದೆ.

  ನೋಟು ರದ್ದತಿಯ 50 ದಿನಗಳು ಪೂರೈಸುವ ವೇಳೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲು ಸಿದ್ಧರಾಗಿರುವ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್‌ನ ಪ್ರಧಾನ ವಕ್ತಾರ ರಣದೀಪ್ ಸುರ್ಜೆವಾಲ, ವಾಸ್ತವಕ್ಕಿಂತ ಭಾರೀ ದೂರವಿರುವ ಘೋಷಣೆಗಳನ್ನು ಮಾಡುವಲ್ಲಿ ಪ್ರಧಾನಿ ಸಿದ್ಧಹಸ್ತರೆಂದು ಟೀಕಿಸಿದ್ದಾರೆ.

 ನೋಟು ರದ್ದತಿಯ 50 ದಿನಗಳ ಬಳಿಕವೂ ಸಾಮಾನ್ಯ ಸ್ಥಿತಿ ಮರಳಿಲ್ಲ. ಪ್ರಧಾನಿಯ ನೋಟು ನಿಷೇಧ ಕ್ರಮವು ‘ದೇಶಬಂದಿಯಾಗಿ(ದೇಶಕ್ಕೆ ಬೀಗಮುದ್ರೆ) ಪರಿಣಮಿಸಿದೆ. ಅಭಿವೃದ್ಧಿ ನಿಲುಗಡೆಗೆ ಬಂದಿದೆ. ಇದೊಂದು ಹಗರಣವಾಗಿದ್ದು, ಅನಗತ್ಯ ಕ್ರಮವಾಗಿದೆ. ಅದರಿಂದ ದೇಶದಲ್ಲಿ ಆರ್ಥಿಕ ಅಸ್ಥಿರತೆ ಉಂಟಾಗಿದೆ. ನಗದು ಅಭಾವದಿಂದಾಗಿ ದೇಶಾದ್ಯಂತ ಹಲವರು ಸತ್ತಿದ್ದಾರೆ. ಇದು ದೇಶದ ಬಡವರ ಮೇಲೆ ನಡೆಸಿದ ಸರ್ಜಿಕಲ್ ದಾಳಿಯಾಗಿದ್ದು, ಅವರಿಗೆ ಭಾರೀ ಸಂಕಷ್ಟವನ್ನುಂಟು ಮಾಡಿದೆಯೆಂದು ಅವರು ಜೈಪುರದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯೊಂದರಲ್ಲಿ ಆರೋಪಿಸಿದ್ದಾರೆ.

ನೋಟು ನಿಷೇಧದಿಂದ 50 ದಿನಗಳಲ್ಲಿ 115 ಸಾವುಗಳು ಸಂಭವಿಸಿವೆ. ಆರ್‌ಬಿಐ ತನ್ನ ನಿಯಮಗಳನ್ನು 126 ಸಾರಿ ಬದಲಾಯಿಸಿದೆ. ರದ್ದಾದಷ್ಟು ನೋಟುಗಳು ಮುದ್ರಣಗೊಳ್ಳಲು 6 ತಿಂಗಳು ಬೇಕು. ಜ.6ರಿಂದ ತಾವು ನೋಟು ರದ್ದತಿಯ ವಿರುದ್ಧ ದೇಶಾದ್ಯಂತ ಸತತ ಪ್ರತಿಭಟನೆಗಳನ್ನು ನಡೆಸಲಿದ್ದೇವೆ. ಮೃತರ ಕುಟುಂಬಗಳಿಗೆ ಪರಿಹಾರ, ವ್ಯಾಪಾರಿಗಳು ಹಾಗೂ ಜನಸಾಮಾನ್ಯರಿಗೆ ಆದಾಯ ಹಾಗೂ ಮಾರಾಟ ತೆರಿಗೆ ವಿನಾಯ್ತಿಗಾಗಿ ತಾವು ಒತ್ತಾಯಿಸುತ್ತಿದ್ದೇವೆಂದು ಸುರ್ಜೇವಾಲ್ ಹೇಳಿದ್ದಾರೆ.

ಪ್ರಧಾನಿ ಇಲ್ಲಿಯ ವರೆಗೆ ಕ್ಷಮೆ ಯಾಚನೆ ಬಿಡಿ, ಸಂತ್ರಸ್ತರಿಗೆ ಸಹಾನುಭೂತಿಯ ಒಂದು ಮಾತನ್ನೂ ಹೇಳಿಲ್ಲ. ಆದರೆ, ಅವರು ಬಯಸಿದ್ದ 50 ದಿನಗಳ ಕೊನೆಗೆ ಈ ವಿಷಯದಲ್ಲಿ ಮಾತನಾಡುವಾಗ ತಾವು ಪ್ರಧಾನಿ ಕ್ಷಮಾ ಯಾಚನೆ ಮಾಡುವುದನ್ನು ತಾವು ನಿರೀಕ್ಷಿಸುತ್ತಿದ್ದೇವೆಂದು ಕಾಂಗ್ರೆಸ್ ನಾಯಕ ಮೀಮ್ ಅಫ್ಝಲ್ ಶ್ರೀನಗರದಲ್ಲಿ ಪತ್ರಕರ್ತರಿಗೆ ತಿಳಿಸಿದ್ದಾರೆ.

ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಯ ಭರವಸೆಯನ್ನು ಮೋದಿ ನೀಡಿದ್ದರು. ಆದರೆ, ಎರಡುವರೆ ವರ್ಷಗಳಲ್ಲಿ ಕೇವಲ 1.5 ಕೋಟಿ ಉದ್ಯೋಗಗಳಷ್ಟೇ ಸೃಷ್ಟಿಯಾಗಿವೆ. ಕಳೆದ ತಿಂಗಳು ನೋಟು ರದ್ದತಿ ಘೋಷಿಸಿದ ಬಳಿಕ, ಕನಿಷ್ಠ 10 ಕೋಟಿ ಜನರು ನಿರುದ್ಯೋಗಿಗಳಾಗಿದ್ದಾರೆಂದು ಅವರು ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X