ರಾಜ್ಯದಲ್ಲಿ ಭೀಕರ ಬರ: ಇಂದು ಮುಖ್ಯಮಂತ್ರಿಗಳಿಂದ ಪ್ರಧಾನಿ ಭೇಟಿ

ಬೆಂಗಳೂರು, ಡಿ.29: ರಾಜ್ಯದಲ್ಲಿ ಬಿಗಡಾಯಿಸಿರುವ ಬರ ಪರಿಸ್ಥಿತಿಯ ಬಗ್ಗೆ ವಿವರಿಸಿ ಕೇಂದ್ರದಿಂದ ಹೆಚ್ಚಿನ ನೆರವು ಕೋರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವಪಕ್ಷ ನಿಯೋಗದೊಂದಿಗೆ ಡಿ.30ರಂದು ಪ್ರಧಾನಿಯವರನ್ನು ಭೇಟಿಯಾಗಲಿದ್ದಾರೆ.
ಶುಕ್ರವಾರ ಸಂಜೆ 7 ಗಂಟೆಗೆ ಮಂಖ್ಯಮಂತ್ರಿಗಳ ನೇತೃತ್ವದ ನಿಯೋಗ ಪ್ರಧಾನಿಯವರನ್ನು ಭೇಟಿಯಾಗಲಿದೆ. ರಾಜ್ಯದ ಕೃಷಿ, ಕಂದಾಯ ಮತ್ತು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಸಚಿವರು ಮುಖ್ಯಮಂತ್ರಿಗಳೊಂದಿಗೆ ತೆರಳಲಿದ್ದಾರೆ.
ನಿಯೋಗದಲ್ಲಿ ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ, ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ, ಅಪ್ಪಾಜಿಗೌಡ, ಕೇಂದ್ರದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಸಚಿವರು, ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಲಿದ್ದಾರೆ.
Next Story





