ಪೊಲೀಸ್ ಕ್ರೀಡಾಕೂಟ: ಡಿಎಆರ್‌ಗೆ ಸಮಗ್ರ ಪ್ರಶಸ್ತಿ

ಉಡುಪಿ, ಡಿ.30: ಅಜ್ಜರಕಾಡು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ಏರ್ಪಡಿಸಲಾದ ಉಡುಪಿ ಜಿಲ್ಲಾ ಪೊಲೀಸ್ ಕ್ರೀಡಾಕೂಟದಲ್ಲಿ ಸಶಸ್ತ್ರ ಮೀಸಲು ಪೊಲೀಸ್ ಪಡೆಯು(ಡಿಎಆರ್) ಸಮಗ್ರ ಪ್ರಶಸ್ತಿ ಗೆದ್ದುಕೊಂಡಿದೆ.
ಪುರುಷರ ವಿಭಾಗದಿಂದ ಉಡುಪಿ ಉಪವಿಭಾಗದ ನಾಗೇಶ್ ಗೌಡ ವೈಯಕ್ತಿಕ ಚಾಂಪಿಯನ್, ಮಹಿಳಾ ವಿಭಾಗದಿಂದ ಚೈತ್ರಾ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ ಪಡೆದುಕೊಂಡರು.
ಉಡುಪಿ, ಕಾರ್ಕಳ, ಕುಂದಾಪುರ ಪೊಲೀಸ್ ಉಪವಿಭಾಗ ಮತ್ತು ಮಹಿಳಾ ತಂಡಗಳು ಭಾಗವಹಿಸಿದ್ದವು.
ಸಮಾರೋಪ ಸಮಾರಂಭದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ಅಧ್ಯಕ್ಷ ಡಾ.ಪ್ರಭುದೇವ ಬಿ.ಮಾನೆ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಟಿ.ಬಾಲಕೃಷ್ಣ ವಿಜೇತರಿಗೆ ಬಹುಮಾನ ವಿತರಿಸಿದರು.
ಉಡುಪಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್ ಎನ್., ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕಿ ಡಾ.ಸುಮನಾ ಡಿ.ಪಿ. ಉಪಸ್ಥಿತರಿದ್ದರು.
ಉಡುಪಿ ಡಿವೈಎಸ್ಪಿ ಎಸ್.ಜೆ.ಕುಮಾರಸ್ವಾಮಿ ಸ್ವಾಗತಿಸಿದರು.
ಕುಂದಾಪುರ ಡಿವೈಎಸ್ಪಿ ಪ್ರವೀಣ್ ನಾಯಕ್ ವಂದಿಸಿದರು. ಕಂಟ್ರೋಲ್ ರೂಮ್‌ನ ಪ್ರಭಾರ ಪಿಎಸ್ಸೈ ಬಿ. ಮನಮೋಹನ ರಾವ್ ಕಾರ್ಯಕ್ರಮ ನಿರೂಪಿಸಿದರು.





